ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ವರಾಹ ರೂಪಂ..’ ವಿವಾದ: ಹೊಂಬಾಳೆ​​ಗೆ ಹಿನ್ನಡೆ; ಮೇಲ್ಮನವಿ ಅರ್ಜಿ ವಜಾ ಮಾಡಿದ ಕೇರಳ ಹೈಕೋರ್ಟ್

Twitter
Facebook
LinkedIn
WhatsApp
‘ವರಾಹ ರೂಪಂ..’ ವಿವಾದ: ಹೊಂಬಾಳೆ​​ಗೆ ಹಿನ್ನಡೆ; ಮೇಲ್ಮನವಿ ಅರ್ಜಿ ವಜಾ ಮಾಡಿದ ಕೇರಳ ಹೈಕೋರ್ಟ್

‘ಕಾಂತಾರ’ ಸಿನಿಮಾದ (Kantara Movie) ‘ವರಾಹ ರೂಪಂ..’ ಹಾಡು ವಿವಾದದ ಕೇಂದ್ರ ಬಿಂದು ಆಗಿದೆ. ಈ ಹಾಡಿನ ಟ್ಯೂನ್ ಮೇಲೆ ಕೃತಿಚೌರ್ಯದ ಆರೋಪ ಹೊರಿಸಲಾಗಿದೆ. ಮಲಯಾಳಂನ ಖ್ಯಾತ ಮ್ಯೂಸಿಕ್ ಬ್ಯಾಂಡ್ ‘ತೈಕ್ಕುಡಂ ಬ್ರಿಡ್ಜ್’ (Thaikkudam Bridge) ಕೋರ್ಟ್ ಮೆಟ್ಟಿಲೇರಿತ್ತು. ಕೇರಳದ ಕೋಯಿಕ್ಕೋಡ್  ಹಾಗೂ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯಗಳು  ಅರ್ಜಿ ವಿಚಾರಣೆ ನಡೆಸಿ, ‘ಹಾಡನ್ನು ಒಪ್ಪಿಗೆ ಇಲ್ಲದೆ ಪ್ರಸಾರ ಮಾಡಬಾರದು’ ಎಂದು ಆದೇಶ ನೀಡಿದ್ದವು. ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ ಹೊಂಬಾಳೆ ಫಿಲ್ಮ್ಸ್ ಈ ಆದೇಶವನ್ನು ಕೇರಳ ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಆದರೆ, ಕೋರ್ಟ್​ ಈ ಅರ್ಜಿಯನ್ನು ತಿರಸ್ಕರಿಸಿದ್ದು, ‘ಅಧೀನ ನ್ಯಾಯಾಲಯಗಳ ಕಾರ್ಯನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಿದರೆ ಅರ್ಜಿದಾರರ ಶಾಸನಬದ್ಧ ಹಕ್ಕುಗಳಿಗೆ ಚ್ಯುತಿಯಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ. ಹೈಕೋರ್ಟ್ ನಿರ್ದೇಶನವನ್ನು, ‘ನ್ಯಾಯಾಲಯದಿಂದ ಹೊರಗೆ ಈ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಿ’ ಎಂಬ ಪರೋಕ್ಷ ಸೂಚನೆ ಎಂಬಂತೆ ಹಲವರು ವ್ಯಾಖ್ಯಾನಿಸುತ್ತಿದ್ದಾರೆ.

‘ನವರಸಂ..’ ಹಾಡಿನಲ್ಲಿರುವ ಟ್ಯೂನ್​ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂದು ಕೇಳುಗರು ಅಭಿಪ್ರಾಯಪಟ್ಟಿದ್ದರು. ಇದನ್ನು ‘ತೈಕ್ಕುಡಂ ಬ್ರಿಡ್ಜ್​​’ ಗಂಭೀರವಾಗಿ ಪರಿಗಣಿಸಿ ಕೇಸ್ ದಾಖಲು ಮಾಡಿತ್ತು. ಕೇರಳದ ಸ್ಥಳೀಯ ನ್ಯಾಯಾಲಯಗಳು ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿದ್ದವು. ಇದನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ ಹೊಂಬಾಳೆ ಫಿಲ್ಮ್ಸ್​ಗೆ ಈಗ ಹಿನ್ನಡೆ ಆಗಿದೆ. ಕೇರಳ ಹೈಕೋರ್ಟ್​ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಸಿ.ಎಸ್. ದಿಯಾಸ್ ಅವರು ಅರ್ಜಿಯನ್ನು ವಜಾ ಮಾಡಿದ್ದಾರೆ. ಅಲ್ಲದೆ, ಪರ್ಯಾಯ ಕಾನೂನು ಪರಿಹಾರ ಕಂಡುಕೊಳ್ಳಲು ಅವಕಾಶ ನೀಡಿದ್ದಾರೆ.

‘ಅಧೀನ ನ್ಯಾಯಾಲಯಗಳು ಹೊರಡಿಸಿದ ಎಲ್ಲಾ ಆದೇಶಗಳಲ್ಲಿ ನಾವು ಮಧ್ಯ ಪ್ರವೇಶಿಸಬಾರದು. ಹಾಗೆ ಮಾಡಿದರೆ ಅಧೀನ ನ್ಯಾಯಾಲಯಗಳು ಬಲಗುಂದಿದಂತೆ ಆಗುತ್ತವೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ‘ಎಲ್ಲಾ ಮೇಲ್ಮನವಿಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಹಾಗೆ ಮಾಡಿದರೆ ಕೋರ್ಟ್​​ನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತದೆ’ ಎಂದು ಹೈಕೋರ್ಟ್ ಹೇಳಿದೆ. ಈ ಮೂಲಕ ಅರ್ಜಿಯನ್ನು ವಜಾ ಮಾಡಿದೆ. ಇದರಿಂದ ಹೊಂಬಾಳೆ ಫಿಲ್ಮ್ಸ್​ಗೆ ಹಿನ್ನಡೆ ಆಗಿದೆ. ಈಗ ಹೊಂಬಾಳೆ ಫಿಲ್ಮ್ಸ್​ ಈ ವಿಚಾರದಲ್ಲಿ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist