ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೌಸ್ ಪೀರ್ ನಿರ್ದೇಶನದ ಹೊಸ ಚಿತ್ರಕ್ಕೆ ಇಶಾನ ನಾಯಕಿ

Twitter
Facebook
LinkedIn
WhatsApp
ಗೌಸ್ ಪೀರ್ ನಿರ್ದೇಶನದ ಹೊಸ ಚಿತ್ರಕ್ಕೆ ಇಶಾನ ನಾಯಕಿ

ನ್ನಡ ಸಿನಿಮಾರಂಗ ಈಗ ಎಲ್ಲೆಡೆ ಶೈನ್ ಆಗಿದೆ. ಹಾಗೆಯೇ ದಿನ ಕಳೆದಂತೆ ಕನ್ನಡ ಸಿನಿಮಾರಂಗಕ್ಕೆ ಹೊಸಬರ ಆಗಮನವಾಗುತ್ತಲೇ ಇದೆ. ಆ ಸಾಲಿಗೆ ಕನಸು ಕಂಗಳ ಚೆಲುವೆ ಇಶಾನ ಎಂಬ ಅಪ್ಪಟ ಕನ್ನಡತಿ ಕೂಡ ಸೇರಿದ್ದಾಳೆ. ಹೌದು, ಇಶಾನ ಈಗಷ್ಟೇ ಕನ್ನಡ ಚಿತ್ರರಂಗವನ್ನು ಸ್ಪರ್ಶಿಸುತ್ತಿರುವ ಚೆಲುವೆ. ಸದ್ಯ ಇನ್ನೂ ಹೆಸರಿಡದ ಕನ್ನಡ ಸಿನಿಮಾಗೆ ಇಶಾನ ನಾಯಕಿ ಆಗುತ್ತಿದ್ದಾರೆ. ಗೀತ ಸಾಹಿತಿ ಹಾಗು ನಿರ್ದೇಶಕ ಗೌಸ್ ಪೀರ್ ಅವರ ಹೊಸ ಚಿತ್ರಕ್ಕೆ ನಾಯಕಿಯಾಗಿ ಇಶಾನ ಕಾಣಿಸಿಕೊಳ್ಳುತ್ತಿದ್ದಾರೆ.

ಅಂದಹಾಗೆ, ಗೌಸ್ ಪೀರ್ ಅವರು ತಮ್ಮ ವಿ ಕ್ಯಾನ್ ಎಂಟರ್ಟೈನ್ ಬ್ಯಾನರ್ ನಲ್ಲಿ ಥ್ರಿಲ್ಲರ್ ಕಥೆ ಇರುವ ಸಿನಿಮಾ ನಿರ್ದೇಶಿಸುತ್ತಿದ್ದು, ಆ ಚಿತ್ರಕ್ಕೆ ಇಶಾನ ನಾಯಕಿ. ಇನ್ನು, ಇಶಾನ, ಕನ್ನಡ ಸಿನಿಮಾ ಮಾಡುವ‌ ಮೊದಲೇ ತೆಲುಗು ಮತ್ತು ತಮಿಳು ಸಿನಿಮಾಗಳಿಗೂ ನಾಯಕಿಯಾಗಿದ್ದಾರೆ. ತಮಿಳಿನ ‘ರೇಟ್ಲ’ ಎಂಬ ಸಿನಿಮಾದ ಇಬ್ಬರು ನಾಯಕಿಯರ ಪೈಕಿ ಇಶಾನ ಕೂಡ ಒಬ್ಬರು. ವಿಶೇಷವೆಂದರೆ, ಈ ಸಿನಿಮಾಗೆ ಪ್ರಭುದೇವ ಹೀರೋ. ಅವರೊಂದಿಗೆ ನಟಿಸುತ್ತಿರುವ ಇಶಾನಗೆ ಇನ್ನಿಲ್ಲದ ಖುಷಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ