ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಭಾಸ್ ಜೊತೆಗಿನ ಡೇಟಿಂಗ್ ವಿಚಾರಕ್ಕೆ ಮೌನ ಮುರಿದ ಕೃತಿ ಸನೂನ್

Twitter
Facebook
LinkedIn
WhatsApp
ಪ್ರಭಾಸ್ ಜೊತೆಗಿನ ಡೇಟಿಂಗ್ ವಿಚಾರಕ್ಕೆ ಮೌನ ಮುರಿದ ಕೃತಿ ಸನೂನ್

ಚಿತ್ರರಂಗ ಅಂದ ಮೇಲೆ ಇಲ್ಲಿ ಲವ್ ಸ್ಟೋರಿ ಎಲ್ಲಾ ಕಾಮನ್, ಒಂದಲ್ಲಾ ಒಂದು ಗಾಸಿಪ್ ವಿಷ್ಯವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಪ್ರಭಾಸ್ (Darling Prabhas) ಜೊತೆಗಿನ ಡೇಟಿಂಗ್ ವದಂತಿಗೆ ಕೃತಿ ಸನೂನ್ (Kriti Sanon) ಇದೀಗ ಬ್ರೇಕ್ ಹಾಕಿದ್ದಾರೆ.

ಟಿಟೌನ್ ಅಡ್ಡಾದಲ್ಲಿ ಸದ್ಯ ಸೌಂಡ್ ಮಾಡುತ್ತಿರುವ ವಿಷ್ಯಾ ಅಂದ್ರೆ ಪ್ರಭಾಸ್, ಕೃತಿ ಸನೂನ್ ಡೇಟಿಂಗ್ ವಿಚಾರ. ಇದೀಗ ಅದಕ್ಕೆಲ್ಲಾ ನಟಿ ಕೃತಿ ಅವರೇ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ರಿಯಾಲಿಟಿ ಶೋನಲ್ಲಿ ವರುಣ್ ಧವನ್ (Varun Dhawan) ಸ್ವಲ್ಪ ವೈಲ್ಡ್ ಆಗಿ ನಡೆದುಕೊಂಡರು ಅಷ್ಟೇ. ತಮಾಷೆಗೆ ಆಡಿದ ಮಾತಿನಿಂದ ಸಾಕಷ್ಟು ವದಂತಿಗಳು ಹುಟ್ಟಿಕೊಂಡಿವೆ. ಬೇರೆ ಯಾವುದೋ ಮಾಧ್ಯಮದವರು ನನ್ನ ಮದುವೆ ಡೇಟ್ ಅನೌನ್ಸ್ ಮಾಡುವ ಮುನ್ನ ನಾನೇ ಆ ಭ್ರಮೆಯನ್ನು ಹೊಡೆದುಹಾಕುತ್ತೇನೆ. ಎಲ್ಲ ವದಂತಿಗಳು ಆಧಾರರಹಿತವಾಗಿವೆ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಕೃತಿ ಸನೋನ್ ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾರ್ಯವೊಂದರಲ್ಲಿ ಬಾಲಿವುಡ್ ನಟ ವರುಣ್ ಅವರು ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಕೃತಿ ಸನೂನ್ ಕೂಡ ಇದ್ದರು. ಕರಣ್ ಜೋಹರ್ ಕೇಳಿದ ಒಂದು ಪ್ರಶ್ನೆಗೆ ಉತ್ತರಿಸುವಾಗ ನಾಯಕಿಯರ ಪಟ್ಟಿ ಮಾಡಿದ ವರುಣ್ ಧವನ್ ಅವರು ಕೃತಿ ಹೆಸರನ್ನು ಕೈ ಬಿಟ್ಟಿದ್ದರು. ಯಾಕೆ ಎಂದು ಪ್ರಶ್ನಿಸಿದಾಗ ವರುಣ್ ಧವನ್ ಹೊಸ ವಿಷಯ ಬಾಯ್ಬಿಟ್ಟಿದ್ದರು. 

ಈ ಲಿಸ್ಟ್‌ನಲ್ಲಿ ಕೃತಿ ಹೆಸರು ಇಲ್ಲ. ಯಾಕೆಂದರೆ ಅವರ ಹೆಸರು ಬೇರೆ ವ್ಯಕ್ತಿಯ ಹೃದಯದಲ್ಲಿದೆ. ಅವರು ಈಗ ಮುಂಬೈನಲ್ಲಿ ಇಲ್ಲ. ಈಗ ದೀಪಿಕಾ ಪಡುಕೋಣೆ ಜೊತೆ ಶೂಟಿಂಗ್ ಮಾಡುತ್ತಿದ್ದಾರೆ ಎಂದು ವರುಣ್ ಧವನ್ ಹೇಳಿದ್ದ ವಿಡಿಯೋ ವೈರಲ್ ಆಗಿದೆ. `ಪ್ರಾಜೆಕ್ಟ್ ಕೆ’ ಚಿತ್ರಕ್ಕಾಗಿ ಪ್ರಭಾಸ್ ಅವರು ದೀಪಿಕಾ ಜೊತೆ ಶೂಟಿಂಗ್ ಮಾಡುತ್ತಿದ್ದಾರೆ. ಹಾಗಾಗಿ ವರುಣ್ ಹೇಳಿದ್ದು ಪ್ರಭಾಸ್ ಬಗ್ಗೆಯೇ ಎಂದು ಎಲ್ಲರೂ ಊಹಿಸುತ್ತಿದ್ದಾರೆ. ವದಂತಿ ಹೆಚ್ಚಾಗುವುದಕ್ಕೂ ಮುನ್ನವೇ ಕೃತಿ ಸನೂನ್ ಅವರು ಸ್ಪಷ್ಟನೆ ನೀಡಿ, ಎಲ್ಲಾ ವದಂತಿಗೂ ನಟಿ ಬ್ರೇಕ್ ಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ