ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುರುವಾಯನಕೆರೆಯಲ್ಲಿ ಆಟೊ ರಿಕ್ಷಾ ಚಾಲಕನ ಮೃತದೇಹ ಪತ್ತೆ !

Twitter
Facebook
LinkedIn
WhatsApp
ಗುರುವಾಯನಕೆರೆಯಲ್ಲಿ ಆಟೊ ರಿಕ್ಷಾ ಚಾಲಕನ ಮೃತದೇಹ ಪತ್ತೆ !

ಬೆಳ್ತಂಗಡಿ: ಗೆಳೆಯರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಆಟೊ ರಿಕ್ಷಾ ಚಾಲಕನ ಮೃತದೇಹ ಗುರುವಾಯನಕೆರೆಯ ಕೆರೆಯಲ್ಲಿ ಪತ್ತೆಯಾಗಿದೆ.

ಸ್ಥಳೀಯ ಆಟೊ ರಿಕ್ಷಾ ಡ್ರೈವರ್ ಪ್ರವೀಣ್ ಮೃತಪಟ್ಟವರು.

ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕರಾಗಿದ್ದ ಪ್ರವೀಣ್ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ತನ್ನ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಈ ಹುಡುಕಾಟ ನಡೆಸಿದಾಗ ಗುರುವಾಯನಕೆರೆಯ ಕೆರೆಯ ಬಳಿ ಪ್ರವೀಣ್ ರಿಗೆ ಸೇರಿದ ಕೆಲವು ದಾಖಲೆಗಳು ಪತ್ತೆಯಾಗಿದ್ದವು. ಇದರಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು.

ಇನ್ನು ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಬೆಳಾಲು ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರು ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಮಧ್ಯಾಹ್ನ ವೇಳೆ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಶವಾಗಾರಕ್ಕೆ ಸಾಗಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ