ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸ್ಥಗಿತ: ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

Twitter
Facebook
LinkedIn
WhatsApp
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸ್ಥಗಿತ: ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: 1-8  ನೇ ತರಗತಿಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಡ ವಿದ್ಯಾರ್ಥಿಗಳಿಂದ ಪ್ರಧಾನಿ ಮೋದಿ ಸರ್ಕಾರ ಹಣವನ್ನು ಕಸಿದುಕೊಂಡಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.  ನ.29 ರಂದು ಸರ್ಕಾರ 9-10  ನೇ ತರಗತಿಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನ ಯೋಜನೆಯನ್ನು ಸೀಮಿತಗೊಳಿಸಿತ್ತು. 8 ನೇ ತರಗತಿವರೆಗೆ ಶಿಕ್ಷಣದ ಹಕ್ಕು ಕಾಯ್ದೆ ಅನ್ವಯಿಸುತ್ತದೆ ಆದ್ದರಿಂದ ವಿದ್ಯಾರ್ಥಿ ವೇತನವನ್ನು ಆ ವರ್ಗಕ್ಕೆ ಸ್ಥಗಿತಗೊಳಿಸುತ್ತಿರುವುದಾಗಿ ಹೇಳಿತ್ತು.

ಪ್ರಧಾನಿ ಮೋದಿ ಅವರೆ, ನಿಮ್ಮ ಸರ್ಕಾರ ಎಸ್ ಸಿ, ಎಸ್ ಟಿ, ಒಬಿಸಿ, ಅಲ್ಪಸಂಖ್ಯಾತ ಸಮುದಾಯದ 1-8 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೀ ಮೆಟ್ರಿಕ್ ವಿದ್ಯಾರ್ಥಿವೇತನವನ್ನು ಸ್ಥಗಿತಗೊಳಿಸಿದೆ. ಬಡ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಕಸಿದುಕೊಳ್ಳುವುದೇಕೆ? ಈ ರೀತಿ ಬಡ ವಿದ್ಯಾರ್ಥಿಗಳಿಂದ ಕಸಿದುಕೊಳ್ಳುವ ಹಣದಿಂದ ನಿಮ್ಮ ಸರ್ಕಾರ ಎಷ್ಟು ಹಣವನ್ನು ಉಳಿಸುತ್ತದೆ, ಅಥವಾ ಗಳಿಸುತ್ತದೆ? ಎಂದು ಖರ್ಗೆ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಾಂಗ್ರೆಸ್ ಹಾಗೂ ಬಿಎಸ್ ಪಿ ಪಕ್ಷಗಳು ಸರ್ಕಾರ ಬಡವರ ವಿರುದ್ಧವಾಗಿದೆ ಎಂದು ಆರೋಪಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ