ಬೆಂಗಳೂರು: ಪೈಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶಸ್ತ್ರಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭೇದಿಯಿಂದಾಗಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪೈಲ್ಸ್ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ನಗರದ ಹೆಚ್‌ಎಎಲ್ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗ್ಗೆ 11 ಗಂಟೆ ಸಮಾರಿಗೆ ಸಿದ್ದರಾಮಯ್ಯಗೆ ಪೈಲ್ಸ್ ಆಪರೇಷನ್ ಮಾಡಲಾಗುವುದು. ಸಂಜೆ ಡಿಸ್ಚಾರ್ಜ್ ಆಗಿ ಮನೆಯಲ್ಲೇ ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ವರುಣಾ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯ ಕೇಳಿಬಂದಿದೆ. ಎಲ್ಲಿ ಸ್ಪರ್ಧಿಸಬೇಕು ಎಂಬ ಬಗ್ಗೆ ಸಿದ್ದು ಇನ್ನೂ ನಿರ್ಧಾರ ಕೈಗೊಂಡಿಲ್ಲ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist