ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಭಾಗದ ಪರಂಪರೆ ಸಾರುವ ‘ಕುದ್ರು’ ಸಿನಿಮಾ

Twitter
Facebook
LinkedIn
WhatsApp
ಕರಾವಳಿ ಭಾಗದ ಪರಂಪರೆ ಸಾರುವ ‘ಕುದ್ರು’ ಸಿನಿಮಾ

ತ್ತೀಚಿಗೆ ದಕ್ಷಿಣ ಕನ್ನಡದ ಭವ್ಯ ಪರಂಪರೆಯ ಕುರಿತಾದ ಚಿತ್ರಗಳು ಹೆಚ್ಚು ಬರುತ್ತಿದೆ‌. “ಕುದ್ರು” ಸಹ ಅದೇ ಸುಂದರ ಪರಿಸರದಲ್ಲಿ  ನಡೆಯವ ಕಥೆ.  ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.  ನಾನು ಮೂಲತಃ ಉಡುಪಿಯವನು.  ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ “ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದಿದ್ದೇನೆ. ಮಧು ವೈ ಜಿ ಹಳ್ಳಿ ನಿರ್ದೇಶನ ಮಾಡಿದ್ದಾರೆ. “ಕುದ್ರು” ದ್ವೀಪದಲ್ಲಿ  ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಡುಪಿ, ಬೆಂಗಳೂರು, ಗೋವಾ  ಹಾಗೂ ಸೌದಿ ಅರೇಬಿಯಾದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಇಂದು ಅಭಿಮಾನ್ ಸ್ಟುಡಿಯೋದಲ್ಲಿ ಹಾಡಿನ ಚಿತ್ರೀಕರಣ ಮಾಡಿತ್ತಿದ್ದೇವೆ. ಈ ಹಾಡಿಗೆ ಹೆಜ್ಜೆ ಹಾಕಲು ದೂರದ ದೆಹಲಿಯಿಂದ ನಟಿ ನಮ್ರತಾ ಮಲ್ಲ ಬಂದಿದ್ದಾರೆ ಎಂದರು ನಿರ್ಮಾಪಕ ಹಾಗೂ ಕಥೆಗಾರ ಭಾಸ್ಕರ್ ನಾಯಕ್.

“ಕುದ್ರು” ನನ್ನ ಮೊದಲ ನಿರ್ದೇಶನದ ಚಿತ್ರ. ಒಂದು ಸಣ್ಣ ದ್ವೀಪದಲ್ಲಿ ಬೇರೆಬೇರೆ ಸಮುದಾಯದವರು ಸಾಮರಸ್ಯದಿಂದ ಬಾಳುತ್ತಿದಾಗ, ಒಂದು ವಾಟ್ಸಾಪ್ ಸಂದೇಶ ಹೇಗೆ ಅಶಾಂತಿಯನ್ನು  ತಂದು ಹಾಕುತ್ತದೆ ಹಾಗೂ ಬಂದ ತೊಂದರೆಯನ್ನು ನಿವಾರಣೆ ಮಾಡಿಕೊಂಡು‌ ಮತ್ತೆ ಸಾಮರಸ್ಯದಿಂದ ಹೇಗೆ ಜೀವನ ನಡೆಸಬಹುದು ಎಂಬುದನ್ನು “ಕುದ್ರು” ಚಿತ್ರದಲ್ಲಿ ತೋರಿಸುತ್ತಿದ್ದೇವೆ. ಹರ್ಷಿತ್ ಶೆಟ್ಟಿ, ಗಾಡ್ವಿನ್ ಹಾಗೂ ಫರ್ಹಾನ್ ಚಿತ್ರದ ನಾಯಕರಾಗಿ ನಟಿಸಿದ್ದು, ಪ್ರಿಯಾ ಹೆಗ್ಡೆ, ವಿನುತ ಹಾಗೂ ಡೈನ ಡಿಸೋಜ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೂವರು ನಾಯಕರು ನಮ್ರತಾ ಅವರೊಂದಿಗೆ  ಅಭಿನಯಿಸುತ್ತಿರುವ ಈ ಹಾಡಿನ ಚಿತ್ರೀಕರಣದೊಂದಿಗೆ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಲಿದೆ.‌ ಪ್ರತೀಕ್ ಕುಂಡು ಸಂಗೀತ ನಿರ್ದೇಶನ ಹಾಗೂ ದೀಪು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.  ಎಪ್ಪತ್ತಕ್ಕೂ ಅಧಿಕ ಭಾಗದ ಚಿತ್ರೀಕರಣ ರೈನ್ ಎಫೆಕ್ಟ್ ನಲ್ಲೇ ನಡೆದಿರುವುದು ಚಿತ್ರದ ವಿಶೇಷ ಎಂದರು ನಿರ್ದೇಶಕ ಮಧು ವೈ ಜಿ ಹಳ್ಳಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ