ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Kolar: ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

Twitter
Facebook
LinkedIn
WhatsApp
Kolar: ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕೋಲಾರ (ಡಿ.08): ಹೆತ್ತ ತಾಯಿಯೇ ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಳಬಾಗಿಲಿನ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಆಂಧ್ರ ಪ್ರದೇಶದ ರಾಮಸಮುದ್ರದ ನಿವಾಸಿ ಜ್ಯೋತಿ ಎಂಬುವರು ತನ್ನ ಮಕ್ಕಳಾದ ಉದಯಶ್ರೀ (8) ಹಾಗೂ ಅಕ್ಷರ(6) ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಬೆಂಕಿ ಹಚ್ಚಿಕೊಂಡಿದ್ದಾರೆ. ಘಟನೆಯಲ್ಲಿ ಆರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. 

ಮತ್ತೊಂದು ಮಗು ಹಾಗೂ ತಾಯಿ ಸುಟ್ಟಗಾಯಗಳಿಂದ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಮುಳಬಾಗಿಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆತ್ತಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸಲಾಗಿದೆ. 

ಗಂಡ ಬಿಟ್ಟು ಹೋಗಿರೋದಕ್ಕೆ ಮನನೊಂದು ಜ್ಯೋತಿ ಗಂಡನಿಲ್ಲದೇ ಜೀವನ ಸಾಗಿಸೋದಕ್ಕೆ ಕಷ್ಟವಾಗುತ್ತೆ ಎಂದು ನಿರ್ಧರಿಸಿ, ಮೊದಲು ಮಕ್ಕಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಇಬ್ಬರು ಮಕ್ಕಳೊಂದಿಗೆ ಇಲ್ಲಿಗೆ ಆಗಮಿಸಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ