ಶನಿವಾರ, ಮೇ 4, 2024
17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚರಂಡಿಯಲ್ಲಿ ಸಿಕ್ಕ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವಪತ್ತೆ

Twitter
Facebook
LinkedIn
WhatsApp
ಚರಂಡಿಯಲ್ಲಿ ಸಿಕ್ಕ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವಪತ್ತೆ

ನವದೆಹಲಿ: ಚರಂಡಿಯೊಳಗೆ ಎಸೆದಿದ್ದ ಸೂಟ್‌ಕೇಸ್ ಒಂದರಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಪಶ್ಚಿಮ ಭಾಗದ ಚರಂಡಿಯಲ್ಲಿ ಈ ಘಟನೆ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಬಹುಶಃ ಮಹಿಳೆಯನ್ನು ಬೇರೆ ಜಾಗದಲ್ಲಿ ಹತ್ಯೆ ಮಾಡಿ ನಂತರ ಸೂಟ್‌ಕೇಸ್‌ನಲ್ಲಿ ತುಂಬಿಸಿ ಚರಂಡಿಗೆಸೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಿದ್ದಾರೆ. 

ಪಶ್ಚಿಮ ದೆಹಲಿಯ ಪಂಜಾಬಿ ಬಾಘ್‌ನಲ್ಲಿ ಈ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ ಇದೇ ದಾರಿಯಲ್ಲಿ ಹಾದು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಈ ಸೂಟ್‌ಕೇಸ್‌ನ್ನು ಗಮನಿಸಿದ್ದು, ಅಲ್ಲಿ ಸಹಿಸಲಾಗದಷ್ಟು ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಆ ಸೂಟ್‌ಕೇಸ್‌ನ್ನು ಕೆಲವು ಈಜುಗಾರರು ಹಾಗೂ ಪೊಲೀಸರ ಸಹಾಯದಿಂದ ಮೇಲೆತ್ತಲಾಗಿದೆ. 

ಮೃತದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಈ ಶವದ ಗುರುತು ಪತ್ತೆ ಸಾಧ್ಯವಾಗಿಲ್ಲ. ಆದರೆ ಮೃತದೇಹವೂ ಸಣ್ಣ ಪ್ರಾಯದ ಯುವತಿಯದ್ದೆಂಬಂತೆ ಕಾಣಿಸುತ್ತಿದೆ. ನಾವು ಆ ಮೃತದೇಹ, ಸೂಟ್‌ಕೇಸ್ ಹಾಗೂ ಕೆಲವು ಮಾದರಿಗಳನ್ನು ಆಸ್ಪತ್ರೆಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮರಣೊತ್ತರ ಪರೀಕ್ಷೆ (autopsy) ಹಾಗೂ ವೈದ್ಯಕೀಯ ತಪಾಸಣೆ (medical examination) ನಂತರ ನಾವು ಏನಾಗಿರಬಹುದು ಎಂದು ತಿಳಿಯಬಹುದು. ಅಲ್ಲದೇ ಸಾವಿನ ಕಾರಣವೂ ತಿಳಿದಿಲ್ಲ, ಮೃತದೇಹ ಕೊಳೆತಿರುವುದರಿಂದ ದೇಹದಲ್ಲಿ ಗಾಯಗಳಿರುವ ಬಗ್ಗೆ ನೋಡಲಾಗದು ಎಂದು ಪಶ್ಚಿಮ ವಿಭಾಗದ ಡಿಸಿಪಿ ಘನಶ್ಯಾಮ ಬೆನ್ಸಲ್ (Ghanshyam Bansal) ಹೇಳಿದ್ದಾರೆ. 

ಬೇರೆ ಸ್ಥಳದಲ್ಲಿ ಯುವತಿಯನ್ನು ಕೊಂದು ಸೂಟ್‌ಕೇಸ್‌ಗೆ ತುಂಬಿಸಿ ಇಲ್ಲಿಗೆ ತಂದು ಪಂಜಾಬ್ ಬಾಘ್ (Punjabi Bagh) ಚರಂಡಿಗೆ ಎಸೆಯಲಾಗಿದೆ. ಶವವೂ ಸಂಪೂರ್ಣವಾಗಿ ಕೊಳೆತಿರುವುದರಿಂದ ಏನಾಗಿದೆ ಎಂದು ತಿಳಿಯುವುದಕ್ಕೆ ಆಗುತ್ತಿಲ್ಲ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಘಟನೆಯ ಬಗ್ಗೆ ಸುಳಿವು ಸಿಗಬಹುದು ಎಂಬ ಕಾರಣಕ್ಕೆ ಪೊಲೀಸರು ಸುತ್ತಮುತ್ತಲ ಸಿಸಿಟಿವಿಗಳನ್ನು (CCTV)  ಕೂಡ ಪರಿಶೀಲಿಸಿದ್ದಾರೆ. ಅಲ್ಲದೇ ಕೆಲವು ನಾಪತ್ತೆಯಾದ ವ್ಯಕ್ತಿಗಳ ಪಟ್ಟಿಯನ್ನು ಕೂಡ ಪರೀಕ್ಷಿಸುತ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ