ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಲಕಿ ಮೇಲೆ ಅತ್ಯಾಚಾರ – ಅಪ್ರಾಪ್ತ ಬಾಲಕ ಸೇರಿ ನಾಲ್ವರ ಬಂಧನ

Twitter
Facebook
LinkedIn
WhatsApp
ಬಾಲಕಿ ಮೇಲೆ ಅತ್ಯಾಚಾರ – ಅಪ್ರಾಪ್ತ ಬಾಲಕ ಸೇರಿ ನಾಲ್ವರ ಬಂಧನ

ಹಾಸನ: ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನಲ್ಲಿ ನಡೆದಿರುವ ಅಪ್ರಾಪ್ತ ಬಾಲಕಿ (Girl) ಮೇಲೆ ಪೈಶಾಚಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಘಟನೆಗೆ ಸಂಬಂಧಿಸಿ ಕಾಫಿ ತೋಟದ ಮಾಲೀಕ ಸುದರ್ಶನ್, ಸ್ವಾಗತ್, ಪಾಪಣ್ಣ ಹಾಗೂ ಓರ್ವ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಕಿರಾತಕರಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ (Rape) ಎಸಗಿದ್ದಾರೆ. ಬಾಲಕಿ ಕಾಫಿ ತೋಟದಲ್ಲಿ ಪೋಷಕರೊಂದಿಗೆ ನೆಲೆಸಿದ್ದಳು.

ಕೂಲಿ ಅರಸಿ ಬಂದು ತೋಟದ ಲೈನ್ ಮನೆಯಲ್ಲಿದ್ದ ಕಾರ್ಮಿಕನ ಮಗಳ ಮೇಲೆ ತೋಟದ ಮಾಲೀಕ ನೀಚ ಕೃತ್ಯ ಎಸಗಿದ್ದಾನೆ. ಅಪ್ರಾಪ್ತೆ ಮೇಲೆ ಕ್ರೌರ್ಯ ಮೆರೆದ ನಾಲ್ವರು ಪಾಪಿಗಳು ಅಂದರ್ ಆಗಿದ್ದಾರೆ.‌ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. (Arrest)

ಬಾಲಕಿ ಅನಾರೋಗ್ಯದಿಂದ ಆಸ್ಪತ್ರೆಗೆ ಬಂದಾಗ ಗರ್ಭಿಣಿಯಾಗಿರುವ ವಿಚಾರ ತಿಳಿದು ಪರಿಶೀಲನೆ ನಡೆಸಿದಾಗ ಈ ಪೈಶಾಚಿಕ ಕೃತ್ಯ ಬಯಲಾಗಿದೆ. ಬಾಲಕಿಯನ್ನು ಪುಸಲಾಯಿಸಿ ವಂಚಿಸಿ ಪಾಪಿಗಳು ಅತ್ಯಾಚಾರ ಎಸಗಿದ್ದಾರೆ.‌‌ ನಾಲ್ವರ ವಿರುದ್ಧವೂ ಪೋಕ್ಸೋ ಸೇರಿ ವಿವಿಧ ಕಾನೂನಿನಡಿ ಕೇಸ್ ದಾಖಲಾಗಿದೆ. ಸಂತ್ರಸ್ತ ಬಾಲಕಿಗೆ ಮಕ್ಕಳ ಕಲ್ಯಾಣ ಸಮಿತಿ ಆಶ್ರಯ ನೀಡಿದ್ದು,‌‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಿಡಬ್ಲೂಸಿ ನೇತೃತ್ವದಲ್ಲಿ ದೂರು ನೀಡಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ