ಬಳ್ಳಾರಿ: ರಸ್ತೆ ದಾಟುವ ವೇಳೆ ವಿದ್ಯಾರ್ಥಿಗಳಿಗೆ (Student) ಸಾರಿಗೆ ಬಸ್ (Bus) ಹರಿದು ಹೊಡೆದು ಮೂವರು ವಿದ್ಯಾರ್ಥಿಗಳು (Student) ಮೃತಪಟ್ಟ ಘಟನೆ ಬಳ್ಳಾರಿ (Ballari) ತಾಲೂಕಿನ ಹಲಕುಂದಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಎಮ್ಮಿಗನೂರಿನ ಕನಕರಾಜು (19), ಮುರುಡಿ ಗ್ರಾಮದ ಶಂಕರ (18), ಸಂಡೂರು ತಾಲೂಕಿನ ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಡುಬಡತನಲ್ಲಿ ಬೆಳೆದ ಈ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮುಂದುವರಿಸಲು ಶಾಲೆಗೆ ರಜೆ ಇರುವಾಗಲೆಲ್ಲ ಪಾರ್ಟ್ ಟೈಮ್ ಕೆಲಸಕ್ಕೆ ಹೋಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಕೆಲಸ ಮುಗಿಸಿಕೊಂಡು ಹಾಸ್ಟೆಲ್‍ಗೆ ವಾಪಸ್ ಹೋಗಲು ರಸ್ತೆ ದಾಟುವಾಗ ಕಲಬುರಗಿಗೆ ತೆರಳುತ್ತಿದ್ದ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಘಟನೆಗೆ ಸಂಬಂಧಿಸಿ ವಿಮ್ಸ್ ಆಸ್ಪತ್ರೆಯಲ್ಲಿ ಹೈಡ್ರಾಮಾ ನಡೆದಿದ್ದು, ತಾಲೂಕು ಅಧಿಕಾರಗಳನ್ನು ಹಾಸ್ಟೆಲ್ ವಿದ್ಯಾರ್ಥಿಗಳು ತರಾಟೆಗೆ ತೆಗೆದುಕೊಂಡರು. ಮೊಬೈಲ್ ಕಿತ್ತು ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದರು. ಇಲಾಖೆಯ ಅಧಿಕಾರಿಯನ್ನು ನೂಕಾಡಿ ತಳ್ಳಾಡಿ ವಿದ್ಯಾರ್ಥಿಗಳು ಹೈಡ್ರಾಮ ಮಾಡಿದ್ದಾರೆ. ಅಷ್ಟೇ ಅಲ್ಲದೇ ಎಸ್ಸಿ ಎಸ್ಟಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳಿಗೆ ಕಿರುಕೊಳ ಕೊಡ್ತೀರಿ. ಸಾವಿಗೀಡಾದ ವಿದ್ಯಾರ್ಥಿಗಳು ಎರಡು ದಿನದಿಂದ ಹಾಸ್ಟೆಲ್‍ನಲ್ಲಿ ಇಲ್ಲವೆಂದು ಸುಳ್ಳು ಹೇಳ್ತಿರಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸಮಾಧಾನ ಮಾಡಿದರು.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist