ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Crime: ಕಾಡುಗಳ್ಳ ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ಗೆ ಜಾಮೀನು

Twitter
Facebook
LinkedIn
WhatsApp
Crime: ಕಾಡುಗಳ್ಳ ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ಗೆ ಜಾಮೀನು

ಚಾಮರಾಜನಗರ (ಡಿ.20): ರಾಜ್ಯದ ಕುಖ್ಯಾತ ಕಾಡುಗಳ್ಳಿ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ (68) ಬಿಡುಗಡೆಯಾದ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾನೆ. ಜ್ಞಾನ ಪ್ರಕಾಶ್‌ 1993 ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದನು. ಆದರೆ, ಮಾನವೀಯತೆ ಆಧಾರದ ಮೇಲೆ ಜಾಮೀನು ಮಂಜೂರು‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ತಮಿಳುನಾಡು, ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿನ ಕಾಡುಗಳಲ್ಲಿ ಅವಿತು ಶ್ರೀಗಂಧ ಮರ ಕಡಿದು ಸಾಗಣೆ, ಆನೆದಂತ, ಕಾಡು ಪ್ರಾಣಿಗಳ ಚರ್ಮಗಳನ್ನು ಸ್ಮಗ್ಲಿಂಗ್‌ ಮಾಡುತ್ತಿದ್ದ ವೀರಪ್ಪನ್‌ ಅನ್ನು ಹಿಡಿಯಲು ಪೊಲೀಸರು ಮಾಡಿದ ಸಾಹಸ ಅಷ್ಟಿಷ್ಟೇನಲ್ಲ. ಪ್ರತಿಬಾರಿ ದಾಳಿ ಮಾಡಿದಾಗಲೂ ಹಲವು ಪೊಲೀಸರು ಸಾವನ್ನಪ್ಪಿದ್ದರು. ಹೀಗೆ ಪೊಲೀಸರ ದಾಳಿ ವೇಳೆ ಸಿಕ್ಕಿದ್ದ ಜ್ಞಾನ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದರು. ನಂತರ ಶಿಕ್ಷೆಗೆ ಗುರಿಪಡಿಸಲಾಗಿತ್ತು. ಜೈಲಿನಲ್ಲಿದ್ದ ಜ್ಞಾನ ಪ್ರಕಾಶ್‌ ಹಲವು ದಿನಗಳಿಂದ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದನು.

ಮರಣದಂಡನೆ ಶಿಕ್ಷೆಯಿಂದ ಪಾರು: ಪೊಲೀಸರ ಕೈಗೆ ಸಿಕ್ಕಿದ್ದ ಜ್ಞಾನಪ್ರಕಾಶ್‌ಗೆ ಟಾಡಾ ನ್ಯಾಯಾಲಯದಿಂದ 1997 ರಲ್ಲಿ ಗಲ್ಲುಶಿಕ್ಷೆ ವಿಧಿಸಲಾಗಿತ್ತು. ಆದರೆ, ನಂತರ 2014 ರಲ್ಲಿ ಸುಪ್ರೀಂಕೋರ್ಟ್‌ನಿಂದ ಗಲ್ಲುಶಿಕ್ಷೆಯನ್ನು ಬದಲಿಸಿ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡು ಮಾಡಲಾಗಿತ್ತು. ಆದರೆ, ಸಂವಿಧಾನದಲ್ಲಿ ಯಾವೊಬ್ಬ ದೇಶದ ವ್ಯಕ್ತಿಯೂ ಅನಾರೋಗ್ಯದಿಂದ ಬಳಲಬಾರದು ಮತ್ತು ಸಾಯಬಾರದು ಎಂದು ತಿಳಿಸಲಾಗಿದೆ. ಇದಕ್ಕಾಗಿ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವಂತೆಯೂ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಜ್ಞಾನ ಪ್ರಕಾಶ್‌ಗೆ ಚಿಕಿತ್ಸೆ ಪಡೆಯಲು ಮತ್ತು ಇತರೆ ಕಾರಣಗಳಿಂದ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಎರಡು ವರ್ಷದ ಹಿಂದೆ ಸಾವನ್ನಪ್ಪಿದ್ದ ಒಬ್ಬ ಸಹಚರ: ದಂತಚೋರ ವೀರಪ್ಪನ್ ನೊಂದಿಗೆ ಪಾಲಾರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿ ಜೀವವಧಿ ಶಿಕ್ಷೆ ಅನುಭವಿಸುತ್ತಿದ್ದ ಬಿಲವೇಂದ್ರನ್(70) ಮೈಸೂರಿನ‌ ಕೆ.ಆರ್.ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ತಾಲೂಕಿನ ಮಾರ್ಟಳ್ಳಿ ಗ್ರಾಮದ ಬಿಲವೇಂದ್ರನ್  ಗಲ್ಲು ಶಿಕ್ಷೆಯಿಂದ ಪಾರಾಗಿ ಮೈಸೂರು ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಇದೀಗ ಅನಾರೋಗ್ಯದಿಂದ ಬಿಲವೇಂದ್ರ ಸಾವಿಗೀಡಾಗಿದ್ದಾರೆ. ವೀರಪ್ಪನ್ ಜೊತೆಗೆ ಗುರುತಿಸಿಕೊಂಡು ಅನೇಕ ಕುಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದರು. ಜೈಲಿನಲ್ಲಿ ಪ್ರಜ್ಞೆ ತಪ್ಪಿದ ಹಿನ್ನೆಲೆ ಅಪರಾಧಿಯನ್ನು ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಿಲವೇಂದ್ರನ್ ಸಾವಿಗೀಡಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ