ಚಿಕ್ಕಮಗಳೂರು: ಪ್ರೇಮಿಗಳಿಬ್ಬರು (Lovers) ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಒಂದೇ ವೇಲ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಆಲ್ದೂರು ಸಮೀಪದ ಗುಲ್ಲನ್‍ಪೇಟೆಯ ಸತ್ತಿಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮೃತರಿಬ್ಬರು 20 ರಿಂದ 23 ವರ್ಷದ ಒಳಗಿನವರು ಎಂದು ಅಂದಾಜಿಸಲಾಗಿದೆ. ಮೃತ ಯುವಕನನ್ನು ತಾಲೂಕಿನ ಕಲ್ಲುಗುಡ್ಡೆ ಸಮೀಪದ ಆಣೂರಿನ ದರ್ಶನ್ ಹಾಗೂ ಯುವತಿಯನ್ನು ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾನ್‍ಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ. ಆದರೆ, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ದರ್ಶನ್ ಚಿಕ್ಕಮಗಳೂರಿನಲ್ಲಿದ್ದ, (Chikkamagaluru) ಪೂರ್ವಿಕಾ ಮಂಗಳೂರಿನಲ್ಲಿ (Mangaluru) ಕೆಲಸ ಮಾಡಿಕೊಂಡಿದ್ದಳು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಇಬ್ಬರು ಪ್ರೇಮಿಗಳಿರಬಹುದು ಎಂದು ಶಂಕಿಸಲಾಗಿದೆ. ವೇಲಿನ ಒಂದು ತುದಿಗೆ ಆಕೆ ಕೊರಳೊಡ್ಡಿದ್ದರೆ, ಮತ್ತೊಂದು ತುದಿಗೆ ದರ್ಶನ್ ನೇಣು ಬಿಗಿದುಕೊಂಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಆಲ್ದೂರು ಪೊಲೀಸರು ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ತಂದಿದ್ದಾರೆ. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist