ಹೊಸ ವರ್ಷಾಚರಣೆಯಲ್ಲಿ ಮುಸ್ಲಿಂ ಯುವಕರಿಗೆ ಅವಕಾಶ ಬೇಡ: ಡಿ.31ರಂದು ಅಶ್ಲೀಲ ನೃತ್ಯ ಮತ್ತು ಮಾದಕ ದ್ರವ್ಯಗಳ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು, ನ್ಯೂ ಇಯರ್ ಪಾರ್ಟಿಗೆ ಮುಸ್ಲಿಂ ಯುವಕರು ಬರಬಾರದು ಎಂದು ಬಜರಂಗದಳ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ. ಮದ್ಯಪಾನ ಮಾಡಬಾರದು ಎಂಬ ನಿಯಮವಿದ್ದರೂ ಪಬ್ಗಳಿಗೆ ಮುಸ್ಲಿಂ ಯುವಕರು ಬರ್ತಾ ಇದ್ದಾರೆ. ಇದರ ಹಿಂದೆ ದುಷ್ಕೃತ್ಯದ ಸಂಚಿದೆ. ಹೀಗಾಗಿ ನ್ಯೂ ಇಯರ್ ನ ಎಲ್ಲ ಪಾರ್ಟಿ ಬಂದ್ ಮಾಡಬೇಕು ಎಂದು ಬಜರಂಗದಳ ಪೊಲೀಸ್ ಕಮಿಷನರ್ಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದೆ.
ಹೊಸ ವರ್ಷದ ಹೆಸರಿನಲ್ಲಿ ಡಿ.31ರಂದು ಹಲವು ಹೋಟೆಲ್, ಪಬ್ಗಳು ಮತ್ತು ಕೆಲವು ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ, ಅಶ್ಲೀಲ ನೃತ್ಯ ಮತ್ತು ಮಾದಕ ದ್ರವ್ಯಗಳ ಪಾನ ಪಾರ್ಟಿಗಳನ್ನು ಆಯೋಜನೆ ಮಾಡಿದ್ದು ನಮ್ಮ ಗಮನಕ್ಕೆ ಬಂದಿರುತ್ತದೆ. ಹೊಸ ವರ್ಷದ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮಗಳು ಪಾಶ್ಚಾತ್ಯ ಸಂಸ್ಕೃತಿಯಿಂದ ಕೂಡಿದ್ದು ಇದನ್ನು ಬಜರಂಗದಳ ತೀವ್ರವಾಗಿ ವಿರೋಧಿಸುತ್ತದೆ. ಈಗಾಗಲೇ ಲವ್ ಜಿಹಾದ್ ಹೆಸರಿನಲ್ಲಿ ಮುಗ್ಧ ಹೆಣ್ಣು ಮಕ್ಕಳನ್ನು ಮೋಸಗೊಳಿಸಿ ಅವರನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಚೋದನೆ ನೀಡಲಾಗುತ್ತದೆ.
ಈಗಾಗಲೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಯುವಕರು ಇಂತಹ ಕೃತ್ಯಗಳಲ್ಲಿ ಸಕ್ರೀಯರಾಗಿದ್ದು, ಡ್ರಗ್ಸ್ ಮಾಫಿಯಾ, ಸೆಸ್ಕ್ ಮಾಫಿಯಾದಂತಹ ಜಾಲಗಳು ಜಾಸ್ತಿಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಯಾವುದೇ ಹೋಟೆಲ್, ಪಬ್ಗಳಲ್ಲಿ ಹೊಸ ವರ್ಷದ ಪ್ರಯುಕ್ತ ನಡೆಯುವ ಪಾರ್ಟಿ, ಅಶ್ಲೀಲ ನೃತ್ಯಗಳಿಗೆ ಅನುಮತಿ ನೀಡಬಾರದು ಮತ್ತು ಎಲ್ಲ ಬಾರ್, ಪಬ್ ಮತ್ತು ಹೋಟೆಲ್ಗಳನ್ನು ನಿಗದಿತ ಸಮಯದ ಒಳಗೆ ಮುಚ್ಚಿಸಲು ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಕಮಿಷನರ್ಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಲಾಗಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist