ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೊಸ ಪಕ್ಷ ಘೋಷಿಸುವ ಮೂಲಕ ರಾಜಕೀಯದಲ್ಲಿ ಎರಡನೇ ಇನಿಂಗ್ಸ್ ಆರಂಭಿಸಿದ ಜನಾರ್ದನ ರೆಡ್ಡಿ

Twitter
Facebook
LinkedIn
WhatsApp
ಹೊಸ ಪಕ್ಷ ಘೋಷಿಸುವ ಮೂಲಕ ರಾಜಕೀಯದಲ್ಲಿ ಎರಡನೇ ಇನಿಂಗ್ಸ್ ಆರಂಭಿಸಿದ ಜನಾರ್ದನ ರೆಡ್ಡಿ

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸುತ್ತಾರೆಂದು ಕೆಲವು ದಿನಗಳಿಂದ ಮಾತು ಕೇಳಿಬರುತ್ತಿತ್ತು. ಇದನ್ನು ಬಿಜೆಪಿ (BJP) ನಾಯಕರು ತಳ್ಳಿಹಾಕಿದ್ದರು. ಆದರೆ ಇಂದು (ಡಿ.25) “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಇದರೊಂದಿಗೆ ಜನರ್ಧನ ರೆಡ್ಡಿ ರಾಜ್ಯ ರಾಜಕಾರಣದಲ್ಲಿ ಎರಡನೇ ಚದುರಂಗದಾಟ ಪ್ರಾರಂಭಿಸಿದ್ದಾರೆ. ಈ ಬಗ್ಗೆ ರಾಜ್ಯ ನಾಯಕರು ವಿವಿಧ ಹೇಳಿಕೆಗಳನ್ನು ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ನಾಳೆ (ಡಿ.25) ವರಿಷ್ಠರನ್ನು ಭೇಟಿಯಾಗಿ ಚರ್ಚೆ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.

ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಧೀಮಂತ ನಾಯಕ, ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಇಂದು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸುತ್ತೇನೆ. ಕ್ರಿಸ್‌ಮಸ್ ಹಬ್ಬದ ಶುಭಾಶಯಗಳು. 18ನೇ ವಯಸ್ಸಿನಿಂದಲೇ ಬಸವಣ್ಣನವರ ಕಾಯಕವೇ ಕೈಲಾಸ ಎಂಬುದನ್ನು ನಂಬಿಕೊಂಡು ಬಂದವನು ನಾನು ಎಂದು ಹೇಳಿದರು.

ಸುದೀರ್ಘವಾಗಿ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಘೋಷಿಸಿದರು. ರಾಜ್ಯದಾದ್ಯಂತ ಹೊಸ ಪಕ್ಷವನ್ನು ಸಂಘಟನೆ ಮಾಡುವೆ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುವೆ. ರಾಜ್ಯದ ಪ್ರತಿಯೊಂದು ಮನೆಗೆ ತೆರಳುತ್ತೇನೆ ಎಂದು ಹೇಳಿದರು.

ಮುಂದುವರಿದು, ನನ್ನ ಜೊತೆ ತನ್ನ ಆಪ್ತ ಗೆಳೆಯ ಶ್ರೀರಾಮುಲು ಅವರಿಗೆ ಬರುವಂತೆ ಹೇಳಿಲ್ಲ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಮುಂದಿನ ದಿನಗಳಲ್ಲಿ ನನ್ನ ಪತ್ನಿ ಅರುಣಾ ಲಕ್ಷ್ಮಿ ಅವರು ಸಹ ಪಕ್ಷ ಸಂಘಟನೆಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುವೆ. ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ ಎಂದರು.

ನಾನು ಕೆಲಸ ಮಾಡಿದ ಪಕ್ಷದಿಂದ ಸ್ಥಾನಮಾನ ಸಿಗದ ಹಿನ್ನಲೆಯಲ್ಲಿ ಹೊಸ ಪಕ್ಷ ಸ್ಥಾಪಿಸಬೇಕಾಯಿತು. ಹೀಗಾಗಿ, ನಾನು ಕರ್ನಾಟಕ ರಾಜ್ಯ ಕಲ್ಯಾಣ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಮುಂದೆ ಹೆಜ್ಜೆ ಹಾಕುತ್ತೇನೆ. 10 ರಿಂದ 15 ದಿನಗಳಲ್ಲಿ ಪಕ್ಷದ ಚಿಹ್ನೆ, ಕಚೇರಿ ಬಗ್ಗೆ ಮಾಹಿತಿ ನೀಡುತ್ತೇನೆ ಎಂದರು.

‘ರಾಜ್ಯ ರಾಜಕಾರಣದಲ್ಲಿ ನನ್ನವರು ಎಂದುಕೊಂಡವರಿಂದಲೇ ಮೋಸ ಹೋದೆ. ಕಷ್ಟದಲ್ಲಿ ಯಾರೂ ನನ್ನ ಜೊತೆ ನಿಂತಿಲ್ಲ. ಇದನ್ನು ನನ್ನ ಸ್ನೇಹಿತರು ಈಗಲೂ ಹೇಳುತ್ತಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಬಿಟ್ಟು ಇನ್ನು ಯಾವ ನಾಯಕರು ನನ್ನ ಮನೆಗೆ ಬಂದಿಲ್ಲ. ಅವರಿಬ್ಬರು ಮಾತ್ರ ನನಗೆ ಧೈರ್ಯ ಹೇಳಿದರು. ಅವರನ್ನು ನಾನು ನೆನಪು ಮಾಡಿಕೊಳ್ಳುತ್ತೇನೆ’ ಎಂದು ರೆಡ್ಡಿ ಹೇಳಿದರು.

‘2018ರಲ್ಲಿಯೇ ನಾನು ಸ್ವಂತ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಬಿಜೆಪಿಗೆ 104 ಸ್ಥಾನ ಬಂದಾಗ ಅಮಿತ್ ಶಾ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ, ಅದು ಸಾಧ್ಯವಾಗಲಿಲ್ಲ. ಬಿಜೆಪಿ ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದವು’ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist