ಮುಂಬೈ: ಕಿರುತೆರೆ ನಟಿಯೊಬ್ಬಳು ಟಿವಿ ಧಾರಾವಾಹಿಯೊಂದರ ಶೂಟಿಂಗ್ ಸೆಟ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ವಾಸೈನಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸೆಟ್ ನಲ್ಲಿ ವಾಶ್ ರೂಂಗೆ ಹೋದ ತುನಿಷಾ ಶರ್ಮಾ, ತುಂಬಾ ಹೊತ್ತಿನವರೆಗೂ ವಾಪಸ್ಸಾಗಿಲ್ಲ. ನಂತರ ಡಾಕ್ಟರ್ ಬಾಗಿಲು ಮುರಿದಾಗ, ಆಕೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ತುನಿಷಾ ಶರ್ಮಾ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ‘ಭಾರತ್ ಕಾ ವೀರ್ ಪುತ್ರ ಮಹಾರಾಣಾ ಪ್ರತಾಪ್’ ಧಾರಾವಾಹಿ ಮೂಲಕ ಬಾಲಿವುಡ್ ಕಿರುತೆಗೆ ಪಾದಾರ್ಪಣೆ ಮಾಡಿದ್ದರು.
ಚಕ್ರವರ್ತಿ ಅಶೋಕ ಸಾಮ್ರಾಟ್, ಗಬ್ಬರ್ ಪೊಂಚ್ ವಾಲಾ, ಮಹಾರಾಜ ರಂಜಿತ್ ಸಿಂಗ್, ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ತುನಿಷಾ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗುವ ಮೂಲಕ ಅಪಾರ ಪ್ರಮಾಣದಲ್ಲಿ ಫಾಲೋವರ್ಸ್ ಹೊಂದಿದ್ದರು.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist