ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಇನ್ನಿಲ್ಲ; ತಾಯಿಯ ಅಗಲಿಕೆಗೆ ಮೋದಿ ಭಾವುಕ ಟ್ವೀಟ್; ಅಹಮದಾಬಾದ್'ನತ್ತ ಪ್ರಧಾನಿ

Twitter
Facebook
LinkedIn
WhatsApp
pti12 28 2022 000161b 710x400xt

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು  ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು.

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.

ತಾಯಿಯ ನಿಧನಕ್ಕೆ ಸರಣಿ ಟ್ವೀಟ್ ಮಾಡಿ ಮೋದಿಯವರು ಭಾವುಕರಾಗಿದ್ದಾರೆ. ನಮ್ಮ ತಾಯಿಯ ಜೀವನದ ಮೂರು ಹಂತ ಕಂಡಿದ್ದೇನೆ. ತಪಸ್ವೀ ಬದುಕು, ನಿಸ್ವಾರ್ಥತೆ ಪ್ರತೀಕ, ಮೌಲ್ಯಾಧಾರಿತ ಬದ್ಧತೆ ಎಂದು ಸಂತಾಪ ಸೂಚಿಸಿದ್ದಾರೆ.

ಶಾನ್‌ ದಾರ್‌ ಶತಾಬ್ದಿ ಕಾ ಈಶ್ವರ್‌ ಚರಣೋ ಮೇ ವಿರಾಮ್..‌ ತಾಯಿಯಲ್ಲಿ ಯಾವಾಗಲೂ ತ್ರಿಮೂರ್ತಿಗಳನ್ನು ನಾನು ಕಂಡಿದ್ದೇನೆ. ಅವರ ಬದುಕು ತಪೋ ಸದೃಶ, ನಿಸ್ವಾರ್ಥ ಕರ್ಮಯೋಗಿಯ ಬಾಳ್ವೆ. ಮೌಲ್ಯಗಳಿಗೆ ಬದ್ಧವಾಗಿದ್ದ ತುಂಬು ಜೀವನ..ಅವರಿಗೆ 100 ವರ್ಷ ಪೂರ್ಣವಾದಾಗ ಆಶೀರ್ವಾದ ಪಡೆಯಲು ಭೇಟಿ ನೀಡಿದ್ದೆ. ಆಗ ಅವರು ನೀಡಿದ ಹಿತ ವಚನ ನೆನಪಾಗುತ್ತಿದೆ. ಯಾವಾಗಲೂ ಬುದ್ಧಿವಂತಿಕೆಯಿಂದ ಕೆಲಸಗಳನ್ನು ಮಾಡಿ, ಪರಿಶುದ್ಧತೆಯಿಂದ ಬದುಕಿರಿ ಎಂದು ಹೇಳಿದ್ದರು ಎಂದು ಬರೆದುಕೊಂಡಿದ್ದಾರೆ.

ಅಹಮದಾಬಾದ್’ನತ್ತ ಪ್ರಧಾನಿ
ತಾಯಿಯ ನಿಧನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಅಹಮದಾಬಾದ್‌ಗೆ ತೆರಳಿದ್ದಾರೆ. ಹೌರಾ, ಕೋಲ್ಕತ್ತಾದಲ್ಲಿ ವಂದೇ ಭಾರತ್ ರೈಲಿಗೆ ಫ್ಲ್ಯಾಗ್‌ಆಫ್ ಮತ್ತು ರೈಲ್ವೆಯ ಇತರ ಅಭಿವೃದ್ಧಿ ಕಾಮಗಾರಿಗಳು ಮತ್ತು ನಮಾಮಿ ಗಂಗೆ ಅಡಿ ನಡೆಯುತ್ತಿದ್ದ ಕಾರ್ಯಕ್ರಮಗಳಲ್ಲಿ ಪ್ರಧಾನಿ ಪಾಲ್ಗೊಳ್ಳಬೇಕಿತ್ತು.

ಹಿಂದಿನ ಯೋಜನೆಯಂತೆ ಈ ಕಾರ್ಯಕ್ರಮಗಳು ನಡೆಯಲಿವೆ ಎನ್ನಲಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಬಹುದು ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಹಿರಿಯ ಜೀವವಾಗಿರುವ ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್, ಇದೇ ವರ್ಷದ ಜೂನ್​ ತಿಂಗಳಲ್ಲಿ ನೂರು ವಸಂತಗಳನ್ನು ಪೂರೈಸಿದ್ದರು. ಅಂದು ಸಹ ಮೋದಿ ಖುದ್ದು ಅಮ್ಮನನ್ನು ಭೇಟಿ ಮಾಡಿ, ಅವರ ಪಾದಗಳನ್ನು ತೊಳೆದು ಆಶೀರ್ವಾದ ಪಡೆದಿದ್ದರು. ಅಲ್ಲದೇ, ಇತ್ತೀಚೆಗಷ್ಟೇ ಮುಗಿದ ಗುಜರಾತ್ ವಿಧಾನಸಭೆ ಚುನಾವಣೆಗೂ ಒಂದು ದಿನ ಮೊದಲು ಪ್ರಧಾನಿ ಮೋದಿ ಅವರು ಹೀರಾಬೆನ್​ ಅವರನ್ನು ಭೇಟಿ ಮಾಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಹೀರಾಬೆನ್​ ಅವರು ಗಾಲಿಕುರ್ಚಿಯ ಮೇಲೆ ಬಂದು ಮತ ಚಲಾಯಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist