ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಖ್ಯ ಕಾರ್ಯದರ್ಶಿಗಳ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

Twitter
Facebook
LinkedIn
WhatsApp
narendra modi pti101122

ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳ ನಡುವಣ ಸಹಭಾಗಿತ್ವವವನ್ನು ವೃದ್ಧಿಸುವ ದೃಷ್ಟಿಯಿಂದ ಮಖ್ಯವೆನಿಸಿರುವ ಮುಖ್ಯ ಕಾರ್ಯದರ್ಶಿಗಳ ಸಮಾವೇಶದ ಅಧ್ಯಕ್ಷತೆಯನ್ನು ಇಂದೂ ಸಹ ಪ್ರಧಾನಿ ನರೇಂದ್ರ ಮೋದಿ (Narendra Modi) ವಹಿಸಲಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಶುಕ್ರವಾರ ಸಹ ಪ್ರಧಾನಿ ಭಾಗವಹಿಸಿದ್ದಾರೆ. ಇದು ಮುಖ್ಯ ಕಾರ್ಯದರ್ಶಿಗಳ ಎರಡನೇ ಸಮಾವೇಶವಾಗಿದ್ದು, ಈ ಹಿಂದೆ 2022ರ ಜೂನ್​ನಲ್ಲಿ ಧರ್ಮಶಾಲಾದಲ್ಲಿ ಮೊದಲ ಸಮಾವೇಶ ನಡೆದಿತ್ತು. ರಾಷ್ಟ್ರ ರಾಜಧಾನಿಯಲ್ಲಿ ಜನವರಿ 5ರಿಂದ ಆರಂಭಗೊಂಡಿರುವ ಸಮಾವೇಶದ ಮುಖ್ಯ ಅಜೆಂಡಾ, ರಾಜ್ಯಗಳ ಸಹಭಾಗಿತ್ವದೊಂದಿಗೆ ಸುಸ್ಥಿರ ಆರ್ಥಿಕ ಬೆಳವಣಿಗೆ ಸಾಧಿಸುವ ಬಗ್ಗೆ ಸ್ಪಷ್ಟ ರೂಪುರೇಷೆ ಹೊಂದುವುದಾಗಿದೆ.

ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳು ಮತ್ತು ಡೊಮೇನ್ ತಜ್ಞರನ್ನು ಒಳಗೊಂಡ 200 ಕ್ಕೂ ಹೆಚ್ಚು ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

ಪರಸ್ಪರ ನಂಬಿಕೆಯ ಆಧಾರದ ಮೇಲೆ ಬೆಳವಣಿಗೆ ಸಾಧಿಸುವುದು, ಉದ್ಯೋಗ ಸೃಷ್ಟಿ ಮತ್ತು ಅಂತರ್ಗತ ಮಾನವ ಅಭಿವೃದ್ಧಿಯ ಜತೆಗೆ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಭಾರತವನ್ನು ರೂಪಿಸಲು ಈ ಸಮ್ಮೇಳನವು ಅಡಿಪಾಯ ಹಾಕಲಿದೆ ಎಂದು ಪಿಎಂ ಹೇಳಿದೆ.

ಸಮನ್ವಯತೆಯೇ ಪ್ರಗತಿಗೆ ಆಧಾರ ಸ್ತಂಭ

ಈ ಮಹತ್ವದ ಸಮಾವೇಶದ ಮೂಲಕ ಸಹಕಾರಿ ಒಕ್ಕೂಟ, ಕೇಂದ್ರ ಸಚಿವಾಲಯಗಳು ಮತ್ತು ರಾಜ್ಯದ ಅನೇಕ ಇಲಾಖೆಗಳು ಸಮನ್ವಯವಾಗಿ ಕೆಲಸ ಮಾಡುತ್ತಿದೆ. ಇದು ನವ ಭಾರತದ ಅಭಿವೃದ್ಧಿ ಮತ್ತು ಪ್ರಗತಿಗೆ ಅಗತ್ಯವಾದ ಆಧಾರಸ್ತಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿರುವುದಕ್ಕೆ ಈ ಸಮಾವೇಶ ಒಂದು ಉತ್ತಮ ಉದಾಹರಣೆಯಾಗಿದೆ. ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಒಮ್ಮುಖದ ಮೂಲಕ ದೇಶದಾದ್ಯಂತ ಅತ್ಯಂತ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿ ಮಾಡಲು ಕಾರ್ಯನಿರ್ವಹಿಸಬೇಕಿದೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist