ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕ್ಕರ್ ಇನ್ನಿಲ್ಲ
Twitter
Facebook
LinkedIn
WhatsApp
ಮಂಗಳೂರು, ಜ 10 : ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕ್ಕರ್ (87) ಇಂದು ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆಲವು ಸಮಯಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಜೂನ್ 30, 1936 ರಂದು ಕಾಸರಗೋಡಿನ ಚಂದ್ರಗಿರಿ ತೀರದಲ್ಲಿ ಹುಟ್ತಿ ಬೆಳೆದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು.
ಸಾರಾ ಅಬೂಬಕ್ಕರ್ ಅವರ ಸಾಹಿತ್ಯ ಕೃಷಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಮುಂತಾದ ಪುರಸ್ಕಾರ ಒಲಿದು ಬಂದಿದೆ.
ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.