ಅರಬ್ಬೀ ಸಮುದ್ರದಲ್ಲಿ ಪರ್ಷಿಯನ್ ಬೋಟ್ ಮುಳುಗಡೆ – 17 ಮೀನುಗಾರರ ರಕ್ಷಣೆ
Twitter
Facebook
LinkedIn
WhatsApp
ಕಾರವಾರ: ಅರಬ್ಬೀ ಸಮುದ್ರದಲ್ಲಿ (Arabian Sea) ಬಂಡೆಕಲ್ಲಿಗೆ ತಾಗಿ ಮುಳುಗುತ್ತಿದ್ದ ಬೋಟ್‌ನಿಂದ (Boat Sinking) 17 ಜನ ಮೀನುಗಾರರ (Fishermen) ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ (Uttara Kannada) ಕುಮಟಾ ತಾಲೂಕಿನ ಸಮೀಪದ ಕಡ್ಲೆ ಬಳಿ ನಡೆದಿದೆ
ಆಳ ಸಮುದ್ರದಲ್ಲಿ 17 ಜನ ಮೀನುಗಾರರು ಮೀನುಗಾರಿಕೆಗೆ (Fishing)ತೆರಳಿದ್ದ ಶ್ರೀದೇವಿ ಅನುಗ್ರಹ ಹೆಸರಿನ ಸುಧಾಕರ್ ಕಾರ್ವಿ ಅವರ ಮಾಲೀಕತ್ವದ ಪರ್ಶಿಯನ್ ಬೋಟ್ ಇದಾಗಿದ್ದು, ಮೀನು ಹಿಡಿದುಕೊಂಡು ವಾಪಸ್ಸಾಗುತ್ತಿದ್ದಾಗ ಘಟನೆ ನಡೆದಿದೆ.
ಕರಾವಳಿ ಕಾವಲು ಪಡೆ ರಕ್ಷಣಾ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಹಾಯದಿಂದ 17 ಜನ ಮೀನುಗಾರರನ್ನು ರಕ್ಷಿಸಿ ದಡಕ್ಕೆ ತರಲಾಗಿದೆ. ಬೋಟ್ ಮುಳುಗಡೆಯಾಗಿರುವುದರಿಂದ 10 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಹಾನಿ ಸಂಭವಿಸಿದೆ. ಘಟನೆಯಲ್ಲಿ ಎಲ್ಲಾ ಮೀನುಗಾರರ ರಕ್ಷಣೆ ಮಾಡಲಾಗಿದೆ.