ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಸಮಿತಿ ರಚಿಸಿದ ರಾಜ್ಯ ಸರ್ಕಾರ
ಬೆಂಗಳೂರು (ಜ.31): ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ.
ಸಮಿತಿಯ ನೇತೃತ್ವವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಮೋಹನ್ ಆಳ್ವ(Dr. Mohan Alva) ವಹಿಸಿಕೊಂಡಿದ್ದಾರೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್(V Sunil Kumar) ಅವರು ಟ್ವಿಟ್(Tweet) ಮಾಡಿ ಮಾಹಿತಿ ನೀಡಿದ್ದಾರೆ
“ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ” ಎಂದಿದ್ದಾರೆ.
ಸಚಿವ ಸುನೀಲ್ ಕುಮಾರ್ ಅವರ ಟ್ವಿಟರ್ ಹಂಚಿಕೊಂಡಿರುವ ಮುಖ್ಯಮಂತ್ರಿ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ(Beluru sudarshan)ರವರು, ‘ತುಳುನಾಡಿನಲ್ಲಿ ನನ್ನ ಬದುಕಿನ ನಾಲ್ಕು ವರ್ಷಗಳನ್ನು ಕಳೆದ ನನಗೆ ಸರ್ಕಾರ ತುಳು ಭಾಷೆಗೆ ಸ್ಥಾನಮಾನ ಮಾಡುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ನಿರ್ಧಾರ ನನಗೆ ತುಂಬಾ ಸಂತೋಷ ಕೊಡುವ ಸುದ್ದಿ ಎಂದು ಹೇಳಿದ್ದಾರೆ.