ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆರ್‌ಬಿಐ ಮತ್ತೆ ಹೆಚ್ಚಿಸಿದ ರೆಪೋ ದರ

Twitter
Facebook
LinkedIn
WhatsApp
rbi160604290816406132451640861689

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ. ಇದೀಗ , ಆರ್‌ಬಿಐ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 6.5% ಗೆ ಹೆಚ್ಚಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಕೋರೋನಾ ದಂತಹ ಪರಿಸ್ಥಿತಿ ಎದುರಾದಾಗ ಸ್ಥಿರತೆ ಕಾಯ್ದುಕೊಂಡಿದ್ದ ರೆಪೋ ದರವನ್ನು ಏರಿಕೆ ಮಾಡಲಾಗಿದೆ. ಉದಯೋನ್ಮುಖ ಮಾರುಕಟ್ಟೆ ಆರ್ಥಿಕತೆಗಳು ಆರ್ಥಿಕ ಚಟುವಟಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜೊತೆಗೆ ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದಲ್ಲದೆ, ನೀತಿ ವಿಶ್ವಾಸಾರ್ಹತೆಯನ್ನು ರಕ್ಷಿಸುವ ಜೊತೆಗೆ ತೀಕ್ಷ್ಣವಾದ ವಿನಿಮಯವನ್ನು ಎದುರಿಸುತ್ತಿರುವ ಕುರಿತು ಆರ್ ಬಿಐ ಗವರ್ನರ್ ಮಾಹಿತಿ ನೀಡಿದ್ದಾರೆ.

ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆದ ಮೂರು ದಿನಗಳ ಹಣಕಾಸು ನೀತಿ ಪರಾಮರ್ಶ ಸಭೆಯ ಬಳಿಕ ರೆಪೊ ದರ ಏರಿಕೆ ಕುರಿತಂತೆ ತೀರ್ಮಾನವನ್ನು ಪ್ರಕಟಿಸಲಾಗಿದೆ. ಶೇಕಡ 0.25ರಷ್ಟು ಹೆಚ್ಚಳವಾಗಿದ್ದು, ರೆಪೊ ದರ ಏರಿಕೆಯಿಂದಾಗಿ ಗೃಹ, ವಾಹನ ಸೇರಿದಂತೆ ವಿವಿಧ ಸಾಲಗಳ ಬಡ್ಡಿದರ ಏರಿಕೆಯಾಗಿ ಇಎಂಐ ಕೂಡ ಏರಿಕೆ ಕಾಣಲಿದೆ.

ತಾತ್ಕಾಲಿಕ ಅವಧಿಯ ಅಗತ್ಯ ಪೂರೈಸಲು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಬ್ಯಾಂಕುಗಳು ಫಂಡ್ ಪಡೆಯುತ್ತವೆ. ಬ್ಯಾಂಕುಗಳು ಪಡೆದ ಸಾಲದ ಮೇಲೆ ಆರ್‌ಬಿಐ ಕೊಂಚ ಬಡ್ಡಿದರ ವಿಧಿಸುತ್ತದೆ. ಈ ಬಡ್ಡಿದರವನ್ನೇ ರೆಪೊ ದರ ಎಂದು ಪರಿಗಣಿಸಲಾಗುತ್ತದೆ . ಬ್ಯಾಂಕುಗಳಿಗೆ ಸಾಲ ಪಡೆಯುವುದು ಹೆಚ್ಚು ಕಠಿಣಗೊಳಿಸಲು ಆರ್‌ಬಿಐ ಇಚ್ಚಿಸಿದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವೂ ರೆಪೊ ದರಗಳನ್ನು ಹೆಚ್ಚಿಸುತ್ತದೆ. ರೆಪೊ ದರ ತಗ್ಗಿಸಿದರೆ ಬ್ಯಾಂಕುಗಳು ಆರ್‌ಬಿಐನಿಂದ ಕಡಿಮೆ ಬಡ್ಡಿದರಕ್ಕೆ ಸಾಲ ಪಡೆಯಬಹುದಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ