ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
Twitter
Facebook
LinkedIn
WhatsApp
ಪುತ್ತೂರು, ಫೆ 13 : ಕಬಕ -ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ಟ್ರ್ಯಾಕ್ ನ ಬಲ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.
ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ. ಗೆಜ್ಜೆ, ಸೀರೆ ಮೇಲ್ನೊಟಕ್ಕೆ ಕಾಣಿಸುತ್ತಿದ್ದು, ತಲೆ ಭಾಗ ಯಾವುದೋ ಪ್ರಾಣಿ ತಿಂದಿರುವಂತೆ ಮತ್ತು ಹುಳವಾಗಿರುವುದರಿಂದ ಮುಖ ಗುರುತು ಸಿಗುತ್ತಿಲ್ಲ.
ಇನ್ನು ಸುಮಾರು 35 ರಿಂದ 40 ವರ್ಷದ ಮಹಿಳೆ ಆಗಿರಬಹುದೆಂದು ಊಹಿಸಲಾಗಿದ್ದು, ಎರಡು ಮೂರು ದಿನದ ಹಿಂದೆಯೇ ಮಹಿಳೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ರೈಲ್ವೇ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.