ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ!
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು.
ಈ ಸಂಬಂಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.
ಸಾಲ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.
ಹಾವೇರಿ ಶಾಸಕ ನೆಹರು ಓಲೇಕಾರ್ಗೆ 2 ವರ್ಷ ಜೈಲು ಶಿಕ್ಷೆ: ಮಕ್ಕಳಿಬ್ಬರೂ ಜೈಲು ಪಾಲು:
ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೆಕಾರ್ ಅವರಿಗೆ 2ವರ್ಷ ಜೈಲುಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ 91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.
ಬೆಂಗಳೂರು (ಫೆ.13): ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೆಕಾರ್ ಅವರಿಗೆ 2ವರ್ಷ ಜೈಲುಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ 91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.
ಇನ್ನು ಶಾಸಕ ನೆಹರು ಓಲೆಕಾರ್ ಅವರೊಂದಿಗೆ ಅವರ ಇಬ್ಬರು ಮಕ್ಕಳಿಗೂ 2ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಲಾಗಿದೆ. ನೆಹರು ಓಲೆಕಾರ್ ಮಕ್ಕಳಾದ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರೂ ಜೈಲು ಸೇರಲಿದ್ದಾರೆ. ಬೆಂಗಳೂರಿನ 91 ಸಿಸಿಹೆಚ್ ಕೋರ್ಟ್ ನಿಂದ ಆದೇಶ ಹೊರಡಿಸಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕಟ ಮಾಡಲಾಗಿದೆ. 2 ವರ್ಷ ಜೈಲು ಜೊತೆಗೆ 2ಸಾವಿರ ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ.