ಕಾಸರಗೋಡು: ಎದೆಹಾಲು ಗಂಟಲಲ್ಲಿ ಸಿಲುಕಿ ನವಜಾತ ಶಿಶು ಮೃತ್ಯು
Twitter
Facebook
LinkedIn
WhatsApp
ಬದಿಯಡ್ಕ, ಫೆ 18 : ನವಜಾತ ಶಿಶುವಿನ ಗಂಟಲಲ್ಲಿ ತಾಯಿಯ ಎದೆಹಾಲು ಸಿಲುಕಿ ಸಾವಿಗೀಡಾಗಿದ ಹೃದಯ ವಿದ್ರಾವಕ ಘಟನೆಯೊಂದು ಬದಿಯಡ್ಕದಲ್ಲಿ ವರದಿಯಾಗಿದೆ.
ಎದೆಹಾಲು ಗಂಟಲಲ್ಲಿ ಸಿಲುಕಿ ಉಕ್ಕಿನಡ್ಕ ನಿವಾಸಿಗಳಾದ ಅಬ್ದುಲ್ ರಹ್ಮಾನ್-ತಾಹಿರಾ ದಂಪತಿಯ 25 ದಿನದ ಹಸುಗೂಸು ಸಾವಿಗೀಡಾಗಿದೆ.
ಫೆ. 16ರಂದು ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಹಾಲು ಗಂಟಲಲ್ಲಿ ಸಿಲುಕಿಕೊಂಡು ಮಗು ಅಸ್ವಸ್ಥಗೊಂಡಿತು. ಕೂಡಲೇ ಮಗುವನ್ನು ಬದಿಯಡ್ಕ ಸರಕಾರಿ ಆಸ್ಪತ್ರೆಗೂ ಆ ಬಳಿಕ ಕಾಸರಗೋಡು ಜನರಲ್ ಆಸ್ಪತ್ರೆಗೂ ತಲುಪಿಸಿದರೂ ಜೀವ ರಕ್ಷಿಸಲು ಸಾಧ್ಯವಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.