ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಡಿಕೇರಿ ಫರ್ನಿಚರ್ ಅಂಗಡಿಯಲ್ಲಿ ಅವಘಡ – 7 ಗಂಟೆ ಕಾರ್ಯಾಚರಣೆ ನಡೆಸಿದ್ರೂ ನಿಯಂತ್ರಣಕ್ಕೆ ಬಾರದ ಅಗ್ನಿ

Twitter
Facebook
LinkedIn
WhatsApp
WhatsApp Image 2023 02 20 at 9.29.54 AM 3

ಮಡಿಕೇರಿ: ನಗರದಲ್ಲಿ ಇರುವ ಪೀಠೋಪಕರಣಗಳ ಅಂಗಡಿಯೊಂದರಲ್ಲಿ (Furniture Store) ಸೋಮವಾರ ನಸುಕಿನ ವೇಳೆ ಬೆಂಕಿ (Fire) ಕಾಣಿಸಿಕೊಂಡಿದೆ. ಸತತ 7 ಗಂಟೆಗಳಿಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಇನ್ನೂ ಅಗ್ನಿ ನಿಯಂತ್ರಣಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ನಗರದ ಕೈಗಾರಿಕಾ ಬಡಾವಣೆಯಲ್ಲಿ ಪ್ರಶಾಂತ್ ಫರ್ನಿಚರ್ ಅವರ ದಾಸ್ತಾನು ಮಳಿಗೆಗೆ ಸೋಮವಾರ ನಸುಕಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಗಿಲಿಗೆ ಎಷ್ಟು ತೀವ್ರವಾಗಿದೆ ಎಂದರೆ 30 ಲೋಡ್‌ನಷ್ಟು ನೀರು ಖಾಲಿಯಾದರೂ ಬೆಂಕಿ ಇನ್ನೂ ಉರಿಯುತ್ತಿದೆ. ಸ್ಥಳಕ್ಕೆ ಬಂದಿರುವ ಪೊಲೀಸರು ಕೈಗಾರಿಕಾ ಬಡಾವಣೆಯ ಕೋಹಿನೂರ್ ಜಂಕ್ಷನ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರವನ್ನು ಬಂದ್ ಮಾಡಿದ್ದಾರೆ.

ನೀರು ತುಂಬಿಕೊಂಡ ಅಗ್ನಿಶಾಮಕ ವಾಹನಗಳು ಒಂದರ ಮೇಲೊಂದರಂತೆ ಸ್ಥಳಕ್ಕೆ ಬರುತ್ತಲೇ ಇವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಮರದ ವಸ್ತುಗಳಿಗೆ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ. 

ಕಳೆದ ರಾತ್ರಿ 2 ಗಂಟೆ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಫರ್ನಿಚರ್ ಅಂಗಡಿಯೊಳಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡನೋಡುತ್ತಲೇ ಬೆಂಕಿಯ ಕೆನ್ನಾಲಿಗೆ ಲಕ್ಷಾಂತರ ರೂ. ಬೆಲೆ ಬಾಳುವ ಮರದ ವಸ್ತುಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಫರ್ನಿಚರ್ ಅಂಗಡಿ ಒಳಗೆ ಮೂವರು ಕೂಲಿ ಕಾರ್ಮಿಕರು ಮಲಗುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಲೇ ಅವರು ಅಲ್ಲಿಂದ ಹೊರ ಬಂದು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯವನ್ನು ಮುಂದುವರಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ