ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೃಷ್ಣಾ ನದಿಯಲ್ಲಿ ದೋಣಿ ಪಲ್ಟಿ; ಈಜಿ‌ ದಡ ಸೇರಿದ ಭಕ್ತಾದಿಗಳು!

Twitter
Facebook
LinkedIn
WhatsApp
ಕೃಷ್ಣಾ ನದಿಯಲ್ಲಿ ದೋಣಿ ಪಲ್ಟಿ; ಈಜಿ‌ ದಡ ಸೇರಿದ ಭಕ್ತಾದಿಗಳು!

ವಿಜಯಪುರ: ಕೃಷ್ಣಾ ನದಿಯಲ್ಲಿ ದೋಣಿಯಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಮುಗುಚಿ ಬಿದ್ದಿರುವ ಘಟನೆ ಬಬಲೇಶ್ವರ ತಾಲೂಕಿನ ಬಬಲಾದಿ ಹತ್ತಿರದ ಕೃಷ್ಣಾ ನದಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಆದರೆ ಅದರಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿ ದಡ ಸೇರಿದ್ದಾರೆ. ಬಬಲಾದಿ ಸದಾಶಿವ ಮಠಕ್ಕೆ ದರ್ಶನಕ್ಕೆ ಬಂದಿದ್ದ ಬಾಗಲಕೋಟ ಜಿಲ್ಲೆಯ ಭಕ್ತರು ತೆಪ್ಪದ ಸಹಾಯದಿಂದ ಕೃಷ್ಣಾ ನದಿ ದಾಟುತ್ತಿದ್ದರು. ಈ ಹಂತದಲ್ಲಿ ಸಾಮರ್ಥ್ಯ ಮೀರಿ ಭಕ್ತರು ದೋಣಿ ಏರಿದ್ದರಿಂದ ಕೃಷ್ಣಾ ನದಿ ತೀರದಲ್ಲೇ ದೋಣಿ ಪಲ್ಟಿಯಾಗಿದೆ.

ಬಬಲಾದಿಯ ಸದಾಶಿವ ಮಠದ‌ ಜಾತ್ರೆ ಮುಗಿಸಿಕೊಂಡು ಬಬಲಾದಿ ಮತ್ತು ಮುಂಡಗನೂರು ನಡುವೆ ಕೃಷ್ಣಾ ನದಿಯಲ್ಲಿ ದೋಣಿಯಲ್ಲಿ ಭಕ್ತರು ಊರಿಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ದೋಣಿ ವಾಲುತ್ತಲೇ ತೆಪ್ಪದಲ್ಲಿ ಅಂಚಿನಲ್ಲಿ ಕುಳಿತವರು ನದಿಗೆ ಹಾರಿದ್ದು, ಜನರ ಒತ್ತಡಕ್ಕೆ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದಿದೆ.

ಆದರೆ ನದಿಗೆ ಬಿದ್ದವರು ಹತ್ತಿರದಲ್ಲೇ ನದಿ ತೀರ ಇದ್ದ ಕಾರಣ ಬೇಗನೇ ಈಜಿ ದಡ ಸೇರಿದ್ದಾರೆ. ಇದರಿಂದ ದುರಂತ ತಪ್ಪಿದೆ. ನದಿಯ ಮಧ್ಯಕ್ಕೆ ಹೋದಾಗ ದೋಣಿ ಮುಗುಚಿಕೊಂಡಿದ್ದರೆ ಭಾರೀ ದೊಡ್ಡ ದುರಂತವಾಗುತ್ತಿತ್ತು. ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ