ಮಂಗಳೂರು: ಪಿಕಪ್ ವಾಹನದಿಂದ ಕಾರಿನ ಒಳಹೊಕ್ಕ ಅಲ್ಯುಮಿನಿಯಂ ಪಟ್ಟಿ ; ಕಾರು ಚಾಲಕ ಅಪಾಯದಿಂದ ಪಾರು
Twitter
Facebook
LinkedIn
WhatsApp
ಮಂಗಳೂರು:ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ.
ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಕಾರಿನ ಹಿಂದೆ ಇತ್ತು. ಎರಡೂ ವಾಹನಗಳು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು.ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ ಬ್ರೇಕ್ ಹಾಕಿದಾಗ ಪಿಕ್‌ಅಪ್‌ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ. ಕಾರಿನಲ್ಲಿ ಚಾಲಕ ಮಾತ್ರವಿದ್ದರು. ಪಟ್ಟಿಗಳು ಹಿಂಭಾಗದ ಸೀಟುಗಳನ್ನು ದಾಟಿ ಬಂದು ಚಾಲಕನ ಸೀಟಿಗೆ ತಾಗಿ ನಿಂತಿವೆ. ಕಾರಿಗೆ ಹಾನಿಯಾಗಿದೆ. ಪಿಕ್‌ಅಪ್ ವಾಹನದ ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.