ಬುಧವಾರ, ಮೇ 15, 2024
Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್‌ ವೇಳೆಗೆ ಕರ್ನಾಟಕದಲ್ಲಿ 3,604 ಹೊಸ ಬಸ್‌

Twitter
Facebook
LinkedIn
WhatsApp
file72tlqkuy0wp5bs2ule61613771421 2

ವಿಧಾನಸಭೆ(ಫೆ.23): ರಾಜ್ಯದಲ್ಲಿ 3604 ಹೊಸ ಬಸ್‌ಗಳನ್ನು ಖರೀದಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕ ಭಾಗಕ್ಕೆ 800 ಬಸ್‌ಗಳನ್ನು ಒದಗಿಸಲಾಗುತ್ತದೆ ಎಂದು ಇಂಧನ ಸಚಿವ ಸುನಿಲ್‌ ಕುಮಾರ್‌ ಹೇಳಿದ್ದಾರೆ. 

ವಿಧಾನಸಭೆಯಲ್ಲಿ ಉತ್ತರಿಸಿ, ಶಾಲಾ ಮಕ್ಕಳಿಗೆ ಸಮಸ್ಯೆಯಾಗದಂತೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು. ಜೂನ್‌ ತಿಂಗಳ ವೇಳೆಗೆ ಹೊಸ ಬಸ್‌ಗಳು ಲಭ್ಯವಾಗಲಿವೆ. ಹೊಸ ಬಸ್‌ಗಳನ್ನು ಖರೀದಿ ಮಾಡುತ್ತಿರುವುದರಿಂದ ಅಗತ್ಯವಿರುವ ಕಡೆ ಆದ್ಯತೆ ಮೇಲೆ ಬಸ್‌ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ವ್ಯಾಪ್ತಿಯ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಒಟ್ಟು 45 ಘಟಕಗಳಿವೆ. ಈ ಪೈಕಿ ರಾಯಚೂರು ಒಂದನೇ ಘಟಕವನ್ನು ಪುನರ್‌ ನಿರ್ಮಿಸಲಾಗುತ್ತಿದೆ. ಬಸ್‌ ಘಟಕಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸಾರ್ವಜನಿಕ ಪ್ರಯಾಣಿಕರ ಮತ್ತು ವಿದ್ಯಾರ್ಥಿಗಳ ಅವಶ್ಯಕತೆಗನುಗುಣವಾಗಿ ಬಸ್‌ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. 925 ಚಾಲಕ, 694 ಚಾಲಕ ಕಂ ನಿರ್ವಾಹಕ ಮತ್ತು 300 ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್‌ ಸದಸ್ಯ ಡಾ.ರಂಗನಾಥ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಣಿಗಲ್‌ ತಾಲೂಕಿನಲ್ಲಿ ಒಟ್ಟು 315 ಗ್ರಾಮಗಳಿದ್ದು, ಈ ಪೈಕಿ 297 ಗ್ರಾಮಗಳಿಗೆ ನಿಗಮದ ವತಿಯಿಂದ ಸಾರಿಗೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಉಳಿದ 18 ಗ್ರಾಮಗಳ ರಸ್ತೆಗಳು ಭಾರೀ ವಾಹನಗಳ ಕಾರ್ಯಾಚರಣೆಗೆ ಯೋಗ್ಯವಾಗಿರುವುದಿಲ್ಲ ಎಂದರು. ಈ ವೇಳೆ ರಂಗನಾಥ್‌, ಸರ್ಕಾರವು ನಮಗೆ ಕೇವಲ ಚಾಕಲೇಟ್‌ ತೋರಿಸುತ್ತಿದೆಯೇ ಹೊರತು ಚಾಕಲೇಟ್‌ ನೀಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ