ಪುತ್ತೂರು: ನವ ವಿವಾಹಿತ ಹೃದಯಾಘಾತದಿಂದ ಮೃತ್ಯು
Twitter
Facebook
LinkedIn
WhatsApp
ಪುತ್ತೂರು, ಫೆ : ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ನವ ವಿವಾಹಿತನೋರ್ವ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನರಿಮೊಗರು ಗ್ರಾಮದ ಧರ್ಮನಗರದ ನಿವಾಸಿ ಸುರೇಶ್ (30) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಗ್ಲೋಬಲ್ ಲಿಫ್ಟ್ ಸರ್ವಿಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
ಇನ್ನು ಸುರೇಶ್ ಅವರು ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗಿದ್ದ ಸುರೇಶ್ ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಹತ್ತೀರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.