ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ
Twitter
Facebook
LinkedIn
WhatsApp
ಮಂಗಳೂರು, ಫೆ 23 : ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.