ಸೋಮವಾರ, ಮೇ 20, 2024
ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ದುಬೈಯಲ್ಲಿ ಮಾರ್ಚ್ 19 ರಂದು "ಶಿವದೂತೆ ಗುಳಿಗೆ" ಪ್ರದರ್ಶನ

Twitter
Facebook
LinkedIn
WhatsApp
santu 13.2.23 shivdtt

ದುಬೈ, ಫೆ 23 : ಇದೇ ಬರುವ 2023 ಮಾರ್ಚ್ ತಿಂಗಳ 19 ರಂದು ದುಬಾಯಿಯ ಅಲ್ ನಾಸರ್ ಲಿಸರ್ ಲ್ಯಾಂಡ್ ಐಸ್ ರಿಂಕ್, ಕರಾಮ ಅಡಿಟೋರಿಯಂನಲ್ಲಿ ನಡೆಯಲಿರುವ ಕಲಾ ಸಂಗಮ ಮಂಗಳೂರು ಸಾದರ ಪಡಿಸುವ “ಶಿವದೂತೆ ಗುಳಿಗೆ” ನಾಟಕ ಪ್ರದರ್ಶನದ ಆಮಂತ್ರಣ ಪತ್ರ – ಪ್ರವೇಶ ಪತ್ರ ಬಿಡುಗಡೆ ಸಮಾರಂಭ ಇತ್ತೀಚೆಗೆ ಪ್ರಖ್ಯಾತ ಉದ್ಯಮಿಗಳು, ಕಲಾಪೋಷಕರು, ಕಲಾವಿದರ ಸಮ್ಮುಖದಲ್ಲಿ ದುಬಾಯಿ-ಗೀಸೈಸ್ನ ಫಾರ್ಚೂನ್ ಫ್ಲಾಝದಲ್ಲಿ ಸಂಭ್ರಮದಿಂದ ಸಂಪನ್ನಗೊಂಡಿತು.

ಬಿಡುಗಡೆ ಕಾರ್ಯಕ್ರಮದಲ್ಲಿ ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನ ಮಾಲಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಬಿಲ್ಲವಾಸ್ ದುಬೈಯ ಅಧ್ಯಕ್ಷರಾದ ಪ್ರಭಾಕರ ಸುವರ್ಣ,ಬಿಲ್ಲವಾಸ್ ನ ಸತೀಶ್ ಪೂಜಾರಿ,ಕನ್ನಡ ಪಾಠ ಶಾಲೆ ದುಬೈಯ ಶಶಿಧರ್ ನಾಗರಾಜಪ್ಪ,ಮೊಗವೀರ್ಸ್ ಸಮಾಜದ ಬಾಲಕೃಷ್ಣ ಸಾಲಿಯಾನ್,ಉದ್ಯಮಿಗಳಾದ ಗುಣಶೀಲ್ ಶೆಟ್ಟಿ, ಪ್ರೇಮನಾಥ ಶೆಟ್ಟಿ,ಹರೀಶ್ ಬಂಗೆರ, ಪದ್ಮಶಾಲಿ ಸಮಾಜದ ಧನಂಜಯ ಶೆಟ್ಟಿಗಾರ್,ಅಲ್ ಫರ್ದಾನ್ ಎಕ್ಸೆಂಜ್ ನ ಸಿಇಓ ತಾರನಾಥ ರೈ,ಚಿತ್ರ ನಿರ್ಮಾಪಕ ಆತ್ಮನಂದ ರೈ,ಸಂಘಟಕರಾದ ನೊವೆಲ್ ಅಲ್ಮೇಡಾ,ದಯಾ ಕಿರೋಡಿಯಾನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾರ್ಚ್ 19 ರಂದು ನಗರದ ಉದುಮೇತದ ಅಲ್ ನಸರ್ ಲ್ಯಾಂಡ್ ನ ಐಸ್ ರಿಂಕ್ ನಲ್ಲಿ ಮಧ್ಯಾಹ್ನ 2.30 ಕ್ಕೆ ಮತ್ತು ಸಂಜೆ 6 ಗಂಟೆಗೆ ಪ್ರದರ್ಶವಾಗುವ “ಶಿವದೂತೆ ಗುಳಿಗೆ” ನಾಟಕದ ಟಿಕೆಟ್ ಗಳನ್ನು ಗಣ್ಯರು ಬಿಡುಗಡೆ ಗೊಳಿಸಿ ತುಳುನಾಡಿನ ದೈವ ದೇವರುಗಳ ಕಥೆಯನ್ನು ಒಳಗೊಂಡ ಈ ನಾಟಕವನ್ನು ಯುಎಇಯಲ್ಲಿ ಇರುವ ಎಲ್ಲಾ ತುಳು ಕನ್ನಡಿಗರು ನೋಡಲೇಬೇಕು.ವಿಶೇಷವಾಗಿ ಈ ನಾಟಕವನ್ನು ನಮ್ಮ ಮಕ್ಕಳಿಗೆ ತೋರಿಸಿ ನಮ್ಮ ತುಳುನಾಡ ಸಂಸ್ಕೃತಿಯನ್ನು ಉಳಿಸುವಂತಹ ಪ್ರಯತ್ನ ಆಗಬೇಕು ಎಂದರು. ಈಗಾಗಲೇ ಕರ್ನಾಟಕ, ಮುಂಬೈ ಮತ್ತು ಕೇರಳದ ಗಡಿನಾಡಿನಲ್ಲಿ 400 ಕ್ಕೂ ಅಧಿಕ ಪ್ರದರ್ಶನಗೊಂಡ ಈ ನಾಟಕವನ್ನು ದುಬೈನಲ್ಲಿ ಹೌಸ್ ಫುಲ್ ಪ್ರದರ್ಶನಗೊಳ್ಳಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಮಾತನಾಡಿ ನಾಟಕಕ್ಕೆ ಶುಭ ಹಾರೈಸಿದರು.

ಮಂಗಳೂರಿನ ಪ್ರಸಿದ್ಧ ನಾಟಕ ತಂಡ ಕಲಾಸಂಗಮದ ಸುಮಾರು 28 ಕಲಾವಿದರು ಶ್ರೀ ವಿಜಯ್ ಕುಮಾರ್ ಕೊಡಿಯಾಲಬೈಲ್ ರವರ ಧಕ್ಷ ನಿರ್ದೇಶನದಲ್ಲಿ ಮಾರ್ಚ್ 18ರಂದು ದುಬೈ ಸೇರಲಿದ್ದು, ಕಾಂತಾರ ಚಲನಚಿತ್ರ ಗುರುವ ಖ್ಯಾತಿಯ ಸ್ವರಾಜ್ ಶೆಟ್ಟಿ ಗುಳಿಗನ ಪಾತ್ರದಲ್ಲಿ ಮಿಂಚಲಿದ್ದಾರೆ.

ನಾಟಕ ಸಂಘಟಕರಾದ ಹರೀಶ್ ಬಂಗೆರ,ದಿನೇಶ್ ಶೆಟ್ಟಿ ಕೊಟ್ಟಿಂಜ,ರಾಜೇಶ್ ಕುತ್ತಾರ್, ಗಿರೀಶ್ ನಾರಾಯಣ್,ಪ್ರಕಾಶ್ ಪಕ್ಕಳ,ಶಾನ್ ಪೂಜಾರಿ ನೆರೆದ ಗಣ್ಯರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ