ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಕಳವಾದ ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Twitter
Facebook
LinkedIn
WhatsApp
hr 240223 mobile

ಮಂಗಳೂರು, ಫೆ 24 : ಕಳವಾದ/ಕಳೆದುಹೋದ/ಸುಲಿಗೆಯಾದ ಮೊಬೈಲ್ ಫೋನ್‌ಗಳನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು ಅದರ ವಾರಸುದಾರರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಕಳವಾದ ಮೊಬೈಲ್ ಫೋನ್‌ಗಳ ದುರ್ಬಳಕೆಯನ್ನು ತಡೆಗಟ್ಟುವ ಸಲುವಾಗಿ ಅಂತಹ ಫೊನ್‌ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆಯನ್ನು ದ.ಕ.ಜಿಲ್ಲಾ ಪೊಲೀಸ್ ಇಲಾಖೆಯು CEIR Portal ಮೂಲಕ ಜಾರಿಗೆ ತರಲಾಗಿದೆ. ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್‌ಗಳನ್ನು ಪತ್ತೆ ಹಚ್ಚಿದೆ. ಅಲ್ಲದೆ 4 ಮೊಬೈಲ್ ಫೋನ್‌ಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ನಗರ, ಸುಳ್ಯ ಪೊಲೀಸ್ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಮೊಬೈಲ್ ಕಳೆದು ಹೋದರೆ, ಕಳವಾದರೆ, ಸುಲಿಗೆಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್‌ನಲ್ಲಿ ನಮೂದಿಸಬೇಕು. ಇದರಿಂದ ಕಳೆದು ಹೋದ, ಕಳವಾದ, ಸುಲಿಗೆಯಾದ ಮೊಬೈಲ್ ಫೋನ್‌ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಎಸ್ಪಿ ಮನವಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ