ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಟಲಿಯಲ್ಲಿ ದೋಣಿ ದುರಂತ – 40ಕ್ಕೂ ಹೆಚ್ಚು ವಲಸಿಗರ ದುರ್ಮರಣ

Twitter
Facebook
LinkedIn
WhatsApp
4

ರೋಮ್: ಇಲ್ಲಿನ ಕರಾವಳಿ ಪ್ರದೇಶದ ನಗರ ಕ್ರೋಟೋನ್‌ನಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ದುರಂತಕ್ಕೀಡಾಗಿದ್ದು (Italy Boat Wreck), ಭಾರತ (India), ಪಾಕಿಸ್ತಾನ (Pakistan) ಹಾಗೂ ಅಫ್ಘಾನಿಸ್ತಾನದ 40ಕ್ಕೂ ಹೆಚ್ಚು ವಲಸಿಗರು (Migrants) ಸಾವನ್ನಪ್ಪಿರುವ ಘಟನೆ ನಡೆದಿದೆ.

120 ಮಂದಿಯನ್ನು ಹೊತ್ತ ದೋಣಿಯು ಭೀಕರ ಅಲೆಗಳ ಹೊಡೆತಕ್ಕೆ ಸಿಲುಕಿ, ತುಂಡು ತುಂಡಾಗಿದೆ. ದಡದಿಂದ ಕೆಲವು ಮೀಟರ್‌ಗಳ ಅಂತರದಲ್ಲೇ ಈ ಅವಘಡ ಸಂಭವಿಸಿದ್ದು, ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈಗಾಗಲೇ 43 ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಪಾಕಿಸ್ತಾನದ 24 ಮಂದಿ ಸಾವು: ದೋಣಿ ದುರಂತದಲ್ಲಿ ಪಾಕಿಸ್ತಾನದ 24ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಕಂಬನಿ ಮಿಡಿದಿದ್ದಾರೆ. ಅಲ್ಲದೇ ಇಟಲಿಯ ದೋಣಿ ದುರಂತದಲ್ಲಿ 24ಕ್ಕೂ ಹೆಚ್ಚು ಪಾಕಿಸ್ತಾನಿಯರು ಮುಳುಗಿ ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿಯಾಗಿದೆ. ಆದಷ್ಟು ಬೇಗನೆ ಇರದ ಸತ್ಯಾಸತ್ಯತೆಗಳನ್ನು ಪತ್ತೆಹಚ್ಚುವಂತೆ ವಿದೇಶಾಂಗ ಕಚೇರಿಗೆ ನಿರ್ದೇಶನ ನೀಡುತ್ತೇನೆ ಎಂದು ಹೇಳಿದ್ದಾರೆ.

 

ಇಟಲಿ ಸರ್ಕಾರವು ಸಂಸತ್ತಿನಲ್ಲಿ ನಿನ್ನೆಯಷ್ಟೇ ವಲಸಿಗರ ರಕ್ಷಣೆಗಾಗಿ ಹೊಸ ಮಸೂದೆ ಮಂಡಿಸಿದ್ದು, ಅದರ ಬೆನ್ನಲ್ಲೇ ದೋಣಿ ಮುಳುಗಡೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ