ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

Twitter
Facebook
LinkedIn
WhatsApp
4 1

ದೆಹಲಿ, ಫೆ 27 : ಭಾರತೀಯ ಸೇನೆಗೆ ಅಗ್ನಿವೀರರನ್ನು ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.

ಯೋಜನೆಗೆ ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ನ್ಯಾಯಮೂರ್ತಿ ಸುಬ್ರಮಣಿಯನ್ ಪ್ರಸಾದ್ ಅವರನ್ನೊಳಗೊಂಡ ಪೀಠವು, ಸಶಸ್ತ್ರ ಸೇನಾಪಡೆಗಳ ಈ ಅಲ್ಪಾವಧಿಯ ನೇಮಕಾತಿ ಯೋಜನೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿ ಈ ಕುರಿತ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದೆ.

ದೇಶದ ಹಿತದೃಷ್ಟಿ ಮತ್ತು ಸಶಸ್ತ್ರ ಪಡೆಯನ್ನು ಬಲಪಡಿಸುವ ಉದ್ದೇಶದಿಂದ ಯೋಜನೆ ಜಾರಿಗೆ ತರಲಾಗಿದೆ ಎಂದು ಕೋರ್ಟ್ ಹೇಳಿದೆ.

ಅಗ್ನಿಪಥ್‌ ಯೋಜನೆಯನ್ನು 2022ರ ಜೂನ್‌ 14ರಂದು ಜಾರಿಗೆ ಬಂದಿದೆ. ಯೋಜನೆಯಡಿಯಲ್ಲಿ 17 ಮತ್ತು 21 ವರ್ಷ ವಯೋಮಿತಿಯ ಯುವಜನತೆ 4 ವರ್ಷಗಳ ಅವಧಿಗೆ ನೇಮಕವಾಗಲು ಅರ್ಜಿಸಲ್ಲಿಸಬಹುದು. ಆಯ್ಕೆಯಾದವರನ್ನು ಅಗ್ನಿವೀರರು ಎಂದು ಕರೆಯಲಾಗುತ್ತದೆ.

ಅಗ್ನಿಪಥ್‌ ವಿರುದ್ಧ ಹಲವಾರು ಅರ್ಜಿಗಳು ಕೋರ್ಟ್‌ನಲ್ಲಿ ದಾಖಲಾಗಿತ್ತು. ಸುಪ್ರೀಂಕೋರ್ಟ್‌ ಅವುಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ