ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಟಿ ಖುಷ್ಬೂ ಸುಂದರ್‌ ಆಯ್ಕೆ

Twitter
Facebook
LinkedIn
WhatsApp
Examination 1

ತಮಿಳುನಾಡು, ಫೆ 27 : ತಮಿಳುನಾಡು ರಾಜ್ಯದ ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್‌ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಖುಷ್ಬೂ ಸುಂದರ್ ಅವರನ್ನು ಸೋಮವಾರ ಅಭಿನಂದಿಸಿದ್ದಾರೆ ಮಾತ್ರವಲ್ಲದೆ ಮಹಿಳೆಯರ ಹಕ್ಕುಗಳಿಗಾಗಿ ಅವರ ನಿರಂತರ ಹೋರಾಟಕ್ಕೆ ಸಂದ ಫಲ ಎಂದು ಅಣ್ಣಾಮಲೈ ಹೇಳಿದ್ದಾರೆ.

ಇಂತಹ ದೊಡ್ಡ ಜವಾಬ್ದಾರಿಯನ್ನು ನನಗೆ ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಖುಷ್ಬೂ ಅವರು ಈ ಹಿಂದೆ ಡಿಎಂಕೆ ಪಕ್ಷದಲ್ಲಿದ್ದರು, ನಂತರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು. ಬಳಿಕ ಅಲ್ಲಿಂದ ಬಿಜೆಪಿಗೆ ಸೇರಿದರು. 2021ರಲ್ಲಿ ಬಿಜೆಪಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಖುಷ್ಬೂ ಅವರೊಂದಿಗೆ ಮತ್ತಿಬ್ಬರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ