ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ 109 ರನ್​ಗಳಿಗೆ ಆಲೌಟ್ ಆದ ಭಾರತ

Twitter
Facebook
LinkedIn
WhatsApp
ind vs aus 3rd test 1

ಇಂದೋರ್​ನಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ (India Vs Australia) ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಕೇವಲ 109 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ಟೀಂ ಇಂಡಿಯಾ ನಾಯಕನ ನಿರ್ಧಾರ ತಪ್ಪು ಎಂದು ಸಾಭೀತುಪಡಿಸಿದ ಆಸೀಸ್ ಬೌಲಿಂಗ್ ವಿಭಾಗ ರೋಹಿತ್ ಬಳಗವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಟೀಂ ಇಂಡಿಯಾ ಪರ ಉರುಳಿದ ಅಷ್ಟೂ ವಿಕೆಟ್​ಗಳನ್ನು ಆಸೀಸ್​ನ ಸ್ಪಿನ್​ ವಿಭಾಗ ಕಬಳಿಸಿದ್ದಯ ವಿಶೇಷವಾಗಿತ್ತು. ಆಸೀಸ್ ಪರ ಮ್ಯಾಥ್ಯೂ ಕುಹ್ನೆಮನ್ 5 ವಿಕೆಟ್ ಪಡೆದರೆ, ನಾಥನ್ ಲಿಯಾನ್ 3 ವಿಕೆಟ್ ಹಾಗೂ ಟಾಡ್ ಮರ್ಫಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತದ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ನೀಡಲು ಮುಂದಾದರು. ಆದರೆ 27 ರನ್​ಗಳಿಸುವುದರೊಳಗೆ ಈ ಜೋಡಿ ಬೇರ್ಪಟಿತು. ಬಿಗ್ ಶಾಟ್ ಆಡುವ ಯತ್ನದಲ್ಲಿ ನಾಯಕ ರೋಹಿತ್ ಸ್ಟಂಪ್ ಔಟ್ ಆದರು. ಬಳಿಕ ರನ್ ಖಾತೆಗೆ 7 ರನ್ ಸೇರಿಸುವುದರೊಳಗೆ ಮತ್ತೊಬ್ಬ ಆರಂಭಿಕ ಗಿಲ್ ಕೂಡ ಪೆವಿಲಿಯನ್ ಸೇರಿಕೊಂಡರು. ಬಳಿಕ ಬಂದ ಚೇತೇಶ್ವರ್ ಪೂಜಾರ ಕೂಡ ಕೇವಲ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

 
50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್

ಇನ್ನು ಬ್ಯಾಟಿಂಗ್​ನಲ್ಲಿ ಮುಂಬಡ್ತಿ ಪಡೆದು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ರವೀಂದ್ರ ಜಡೇಜಾ ಕೂಡ ಒಂದು ಬೌಂಡರಿ ಬಾರಿಸಿದ ಬಳಿಕ ಬ್ಯಾಟ್ ಎತ್ತಿಟ್ಟರು. ಹೀಗಾಗಿ ಟೀಂ ಇಂಡಿಯಾ 50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್ ಕಳೆದುಕೊಂಡಿತು. ಜಡೇಜಾ ವಿಕೆಟ್ ಬಳಿಕ ಬಂದ ಶ್ರೇಯಸ್ ಅಯ್ಯರ್ ಕೂಡ ಖಾತೆ ತೆರೆಯದೆ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಒಂದೆಡೆ ವಿಕೆಟ್ ಉರುಳುತ್ತಿದ್ದರು ಕೊಂಚ ಪ್ರತಿರೋಧ ತೋರಿದ ವಿರಾಟ್ ಕೊಹ್ಲಿ ತಂಡದ ಪರ ಅತ್ಯಧಿಕ ರನ್ ಅಂದರೆ 22 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನು ಕೆಎಸ್​ ಭರತ್ 17 ರನ್​ಗಳಿಗೆ ಸುಸ್ತಾದರೆ, ಅಶ್ವಿನ್ 3 ರನ್ ಬಾರಿಸಿದರು. ಅಂತಿಮವಾಗಿ 2 ಭರ್ಜರಿ ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿ, ಸ್ಫೋಟಕ ಆಟಕ್ಕೆ ಮುಂದಾಗಿದ್ದ ಉಮೇಶ್ ಯಾದವ್ ಕೂಡ 17 ರನ್​ಗೆ ಎಲ್​ಬಿ ಬಲೆಗೆ ಬಿದ್ದರು. ಅಂತಿಮವಾಗಿ ರನ್​ಔಟ್ ಆಗುವ ಮೂಲಕ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ