ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

WPL 2023ː ಮಹಿಳೆಯರು, ಹುಡ್ಗೀರಿಗೆ ಪ್ರವೇಶ ಉಚಿತ, ಯಾರೂ ಬೇಕಾದ್ರೂ ಹೋಗ್ಬೋದು

Twitter
Facebook
LinkedIn
WhatsApp
releted photos 2 3

ಮುಂಬೈ: ಇದೇ ಮೊದಲ ಬಾರಿಗೆ ನಡೆಯುತ್ತಿರುವ ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ (WPL 2023) ಕ್ರಿಕೆಟ್ ಟೂರ್ನಿ ವೀಕ್ಷಿಸುವವರಿಗೆ ಬಿಸಿಸಿಐ (BCCI) ಬಂಪರ್ ಆಫರ್ ಕೊಟ್ಟಿದೆ. ಮಹಿಳಾ ಕ್ರಿಕೆಟ್ ಬಗ್ಗೆ ಆಸಕ್ತಿ ಹೆಚ್ಚಿಸಲು ಹಾಗೂ ಸ್ಟೇಡಿಯಂಗಳಲ್ಲಿ ಹೆಚ್ಚಿನ ಜನ ಸೇರುವಂತೆ ಮಾಡಲು ಬಿಸಿಸಿಐ ಮಾಸ್ಟರ್ ಪ್ಲಾನ್ ಮಾಡಿದೆ.

ಮಾರ್ಚ್ 4 ರಿಂದ ಮಾರ್ಚ್ 26ರ ವರೆಗೆ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೆ ಬರುವ ಎಲ್ಲ ಮಹಿಳೆಯರು (Womens) ಹಾಗೂ ಹುಡುಗಿಯರಿಗೆ ಉಚಿತ ಪ್ರವೇಶ ನೀಡಲು ಬಿಸಿಸಿಐ ನಿರ್ಧರಿಸಿದೆ. 

ಚೊಚ್ಚಲ WPL ಆವೃತ್ತಿಯಲ್ಲಿ ಪ್ಲೆ ಆಫ್, ಫೈನಲ್ ಪಂದ್ಯಗಳು ಸೇರಿದಂತೆ ಒಟ್ಟು 22 ಪಂದ್ಯಗಳು ನಡೆಯಲಿವೆ. ಮಾರ್ಚ್ 4ರಂದು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಅದಾನಿ ನೇತೃತ್ವದ ಗುಜರಾತ್ ಜೈಂಟ್ಸ್ (Gujarat Giants)  ಹಾಗೂ ರಿಲಯನ್ಸ್ ಇಂಡಸ್ಟ್ರೀಸ್‌ ನೇತೃತ್ವದ ಮುಂಬೈ ಇಂಡಿಯನ್ಸ್ (Mumbai Indians) ತಂಡಗಳು ಸೆಣಸಲಿವೆ. 

ಈ ಪಂದ್ಯಗಳನ್ನು ವೀಕ್ಷಿಸಲು ಮಹಿಳೆಯರು ಮತ್ತು ಹುಡುಗಿಯರಿಗೆ ಉಚಿತ ಪ್ರವೇಶ ನೀಡಲು ಬಿಸಿಸಿಐ ನಿರ್ಧರಿಸಿದೆ. ಇತ್ತೀಚೆಗೆ ಭಾರತ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯಲ್ಲಿ ಮಹಿಳೆಯರಿಗೆ ಉಚಿತ ಪ್ರವೇಶ ನೀಡಿದ್ದ ತಮ್ಮ ನಿರ್ಧಾರಕ್ಕೆ ಅನುಗುಣವಾಗಿ ಡಬ್ಲ್ಯೂಪಿಎಲ್‌ ಸರಣಿಯಲ್ಲೂ ಉಚಿತಪ್ರವೇಶ ನೀಡಲು ನಿರ್ಧರಿಸಿದೆ. ಪುರುಷರು ಹಾಗೂ ಹುಡುಗರಿಗೆ ಕ್ರಮವಾಗಿ 100 ರೂ. ಹಾಗೂ 400 ರೂ. ಟಿಕೆಟ್ ದರ ನಿಗದಿಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಕಳೆದ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್ ಟೈಟಲ್ ಪ್ರಾಯೋಜಕತ್ವ ಪಡೆದಿದ್ದ ಟಾಟಾ ಸಮೂಹ ಇದೀಗ ಡಬ್ಲ್ಯೂಪಿಎಲ್ ಟೈಟಲ್ ಪ್ರಾಯೋಜಕತ್ವ ಪಡೆಯಲು 5 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಇದು ನಮಗೆ ಸಂತೋಷ ಉಂಟುಮಾಡಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ