ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್​ ಧರಿಸಿ ಬರುವಂತಿಲ್ಲ: ಕಡ್ಡಿ ಮುರಿದಂತೆ ಹೇಳಿದ ಸಚಿವ ನಾಗೇಶ್​

Twitter
Facebook
LinkedIn
WhatsApp
220908194114 apple shift 0908 1

ಬೆಂಗಳೂರು: ಇದೇ ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ (PUC Exams 2023) ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್(Hijab)​ ಧರಿಸಿ ಬರುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್(BC Nagesh)​ ಸೂಚಿಸಿದ್ದಾರೆ. ಇಂದು (ಮಾ.03) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್, ಮಾರ್ಚ್​ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್​ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿವಿಧ ಜಿಲ್ಲೆಗಳಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಮಾಡಿದ್ದರು. ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು ಎಂದು ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ಆದ್ರೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಇಂತಹ ಮನವಿಗಳನ್ನು ಪರಿಗಣಿಸದಂತೆ ಸೂಚನೆಗಳನ್ನು ನೀಡಿದೆ.

ಇದೀಗ ಸ್ವತಃ ಶಿಕ್ಷಣ ಸಚಿವ ಬಿಸಿ ನಾಗೇಶ್​ ಪ್ರತಿಕ್ರಿಯಿಸಿ, ಮಾರ್ಚ್​ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್​ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಹಿಜಾಬ್​ ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಪರೀಕ್ಷೆ ಸಮಯದಲ್ಲಿ ಹಿಜಾಬ್​ ಅನುಮತಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ನಿರ್ಧಾರ ಪ್ರಕಟಿಸಿದರು.

2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ದಿನಾಂಕ 09-3-2023 ರಿಂದ 29-3-2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ನವೆಂಬರ್​ 28 ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ