ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ತಾಪಮಾನ ಹೆಚ್ಚಳ - ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಡಿಸಿ ಸೂಚನೆ

Twitter
Facebook
LinkedIn
WhatsApp
361319 1672041078 1

ಮಂಗಳೂರು, ಮಾ 06 : ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿದ್ದುಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಅಧೀನಕ್ಕೊಳಪಟ್ಟ ವಿದ್ಯಾರ್ಥಿ ನಿಲಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ವಿಶೇಷ ಸೂಚನೆ ನೀಡಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳಿಗೂ ಶುದ್ಧ ಕುಡಿಯುವ ನೀರನ್ನು ಕೊಡಬೇಕು. ಆದಷ್ಟು ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ತಿಳಿಸಬೇಕು.ವಿದ್ಯಾರ್ಥಿ ನಿಲಯಗಳ ಅಡುಗೆ ಕೋಣೆಯನ್ನು ಮತ್ತು ಅಡುಗೆಗೆ ಬಳಸುವ ಪಾತ್ರೆ, ಪರಿಕರಗಳನ್ನು ಸ್ವಚ್ಛವಾಗಿಟ್ಟುಕೊಂಡಿರಬೇಕು. ಅಡುಗೆ ತಯಾರಿಸುವವರು ಮತ್ತು ಆಹಾರ ಬಡಿಸುವವರು ಕೈಗಳ ಶುಚಿತ್ವ ಸೇರಿದಂತೆ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಪ್ರತಿ 6 ತಿಂಗಳಿಗೊಮ್ಮೆ ಅಡುಗೆ ಕೋಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಮತ್ತು ಆಹಾರ ತಯಾರಕರ ಆರೋಗ್ಯ ತಪಾಸಣೆಯನ್ನು ನಡೆಸುವುದು ಸೇರಿದಂತೆ
ವಿದ್ಯಾರ್ಥಿ ನಿಲಯಗಳಿಗೆ ವಿವಿಧ ಮೂಲಗಳಿಂದ ಸರಬರಾಜು ಆಗುವ ನೀರಿನ ಮಾದರಿಯನ್ನು ಪ್ರತೀ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿ, ಕುಡಿಯಲು ಮತ್ತು ಅಡುಗೆ ತಯಾರಿಕೆಗೆ ಸುರಕ್ಷಿತ ನೀರನ್ನು ಒದಗಿಸಲು ಅಗತ್ಯ ವಿದ್ಯಾರ್ಥಿ ನಿಲಯಗಳ ಶೌಚಾಲಯ, ಸ್ನಾನದ ಕೋಣೆಯನ್ನು ಸ್ವಚ್ಚವಾಗಿಡಬೇಕು ಎಂದು

ಬೇಸಿಗೆ ಸಂದರ್ಭ ಆಹಾರ ಪದಾರ್ಥಗಳು ಬೇಗನೆ ಕೆಡುವ ಸಾಧ್ಯತೆ ಇರುವುದರಿಂದ, ಈ ಬಗ್ಗೆ ಗಮನಹರಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಬಿಸಿಯಾದ ಸುರಕ್ಷಿತ ಆಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು.ವಿದ್ಯಾರ್ಥಿ ನಿಲಯಗಳ ಶೌಚಾಲಯ, ಸ್ನಾನದ ಕೋಣೆಯನ್ನು ಸ್ವಚ್ಛವಾಗಿಡಬೇಕು.ಬೇಸಿಗೆ ಸಂದರ್ಭದಲ್ಲಿ ನಿರ್ಜಲೀಕರಣ ಆಗುವ ಸಾಧ್ಯತೆ ಇರುವುದರಿಂದ, ಬಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೂ ಮಾಹಿತಿ ನೀಡಿ ಎಲ್ಲರೂ ಶುದ್ಧ ನೀರು, ದ್ರವ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವಂತೆ ಜಾಗೃತಿ ವಹಿಸಬೇಕು.ಅಡುಗೆ ಕೋಣೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪ್ರತಿದಿನ ಸೂಕ್ತ ರೀತಿಯಲ್ಲಿ ವಿಲೇವಾರಿ ನಡೆಸಬೇಕು.

ಯಾವುದಾದರೂ ವಿದ್ಯಾರ್ಥಿಗೆ ಅನಾರೋಗ್ಯ ಕಂಡುಬಂದಲ್ಲಿ ಕೂಡಲೇ ವೈದ್ಯಾಧಿಕಾರಿ, ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಬೇಕು.ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ