ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

3 ವರ್ಷಗಳ ಬಳಿಕ ಟೆಸ್ಟ್‌ನಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ

Twitter
Facebook
LinkedIn
WhatsApp
1678612371 virat1

ಅಹಮದಾಬಾದ್: ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy) ಸರಣಿಯ 4ನೇ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಶತಕ ಸಿಡಿಸುವ ಮೂಲಕ ಬಹುದಿನಗಳ ಶತಕದ ಬರ ನೀಗಿಸಿಕೊಂಡಿದ್ದಾರೆ.

2019ರಲ್ಲಿ ಬಾಂಗ್ಲಾದೇಶ (Bangladesh) ವಿರುದ್ಧ ನಡೆದ ಟೆಸ್ಟ್‌ನಲ್ಲಿ ಶತಕ ಸಿಡಿಸಿದ್ದ ಕೊಹ್ಲಿ, ಬರೋಬ್ಬರಿ 1,205 ದಿನಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ 28ನೇ ಶತಕ ಸಿಡಿಸಿದ್ದು, 75 ಶತಕಗಳನ್ನ ಪೂರೈಸಿದ್ದಾರೆ.ಬಾರ್ಡರ್ ಗಾವಾಸ್ಕರ್ ಟ್ರೋಫಿ ಸರಣಿಯ ಅಂತಿಮ ಟೆಸ್ಟ್‌ನ 4ನೇ ದಿನದಾಟದಲ್ಲಿ ವಿರಾಟ್ ಕೊಹ್ಲಿ 241 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ ಶತಕ ಸಿಡಿಸಿದ್ದಾರೆ. ಇದು ಕೊಹ್ಲಿ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ 28ನೇ ಶತಕ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನದ 75ನೇ ಶತಕವಾಗಿದೆ. ಜೊತೆಗೆ ಇದು ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ ಸಿಡಿಸಿದ 16ನೇ ಶತಕವಾಗಿದೆ. ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ 20 ಶತಕಗಳನ್ನು ಸಿಡಿಸಿದ್ದರು.

ಸಚಿನ್ ತೆಂಡೂಲ್ಕರ್ 566 ಇನ್ನಿಂಗ್ಸ್‌ಗಳಲ್ಲಿ 75 ಶತಕಗಳನ್ನ ಸಿಡಿಸಿದ್ದರು. ಆದರೆ ಕೊಹ್ಲಿ 552 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.ಆಸ್ಟ್ರೇಲಿಯಾ (Australia) ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 480 ರನ್‌ಗಳಿಗೆ ಆಲೌಟ್ ಆಗಿದೆ. ತನ್ನ ಸರದಿ ಆರಂಭಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಶತಕ ಹಾಗೂ ಅಕ್ಷರ್ ಪಟೇಲ್‌ ಮಿಂಚಿನ ಅರ್ಧಶತಕದ ನೆರವಿನಿಂದ ಅಹಮದಾಬಾದ್‌ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ 571 ರನ್ ಬಾರಿಸಿ ಸರ್ವಪತನ ಕಂಡಿದೆ. ಈ ಮೂಲಕ ಮೊದಲ ಇನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಪಡೆ 91 ರನ್‌ಗಳ ಇನಿಂಗ್ಸ್‌ ಮುನ್ನಡೆ ಗಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ