ಭಾನುವಾರ, ಏಪ್ರಿಲ್ 28, 2024
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏರಿಕೆಯತ್ತ ಚಿನ್ನದ ಬೆಲೆ - ನೋಡಿ ಇವತ್ತಿನ ದರದ ವಿವರಗಳು

Twitter
Facebook
LinkedIn
WhatsApp
gold rate today yellow metal trades flat silver remains below rs 58000

ಬೆಂಗಳೂರು: ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಏರಿಕೆ (Gold Rates Hike) ಆಗುತ್ತಿದೆ. ಶನಿವಾರ ದೊಡ್ಡ ಮಟ್ಟದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಈಗ ಸ್ವಲ್ಪಸ್ವಲ್ಪವೇ ಹೆಚ್ಚುತ್ತಿದೆ. ಭಾರತದಲ್ಲಿ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 52,160 ರುಪಾಯಿಗೆ ಏರಿದೆ. 10 ಗ್ರಾಮ್​ಗೆ 100 ರುಪಾಯಿಯಷ್ಟು ಏರಿಕೆಯಾಗಿದೆ. ಶನಿವಾರವಷ್ಟೇ ಬೆಲೆಗಳು 51 ಸಾವಿರ ಮಟ್ಟಕ್ಕಿಂತ ಕಡಿಮೆ ಇತ್ತು. 24 ಕ್ಯಾರಟ್ ಚಿನ್ನದ ಬೆಲೆ ಎರಡು ದಿನ ಏರಿಕೆ ಕಂಡರೂ ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಭಾರತದಲ್ಲಿ 100 ಗ್ರಾಮ್​ಗೆ 6,570 ರುಪಾಯಿ ಆಗಿದೆ. ಇನ್ನು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, 10 ಗ್ರಾಮ್​ಗೆ 52,210ರುಪಾಯಿಗೆ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ 100 ಗ್ರಾಮ್​ಗೆ 6,870 ರುಪಾಯಿ ಆಗಿದೆ. ದಕ್ಷಿಣ ಭಾರತದ ವಿವಿಧೆಡೆ ಮತ್ತು ಒಡಿಶಾದಲ್ಲಿ ಬೆಳ್ಳಿ ಬೆಲೆ ಏಕಸ್ಥಿತಿಯಲ್ಲಿದೆ.

ವಿದೇಶಗಳ ಚಿನಿವಾರಪೇಟೆಗಳಲ್ಲಿಯೂ (Bullion Market) ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ. ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳು, ಅಮೆರಿಕ, ಸಿಂಗಾಪುರ, ಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಭಾರತಕ್ಕೆ ಹೋಲಿಸಿದರೆ ಕಡಿಮೆ ಇದೆ. ಯುಎಇಯ ಭಾಗವಾಗಿರುವ ದುಬೈ, ಅಬುಧಾಬಿ ಮತ್ತು ಶಾರ್ಜಾ ನಗರಗಳಲ್ಲಿ ಬೆಲೆ ತುಸು ಏರಿಕೆಯಾಗಿದೆ. ಈ ಎಲ್ಲಾ ದೇಶಗಳಲ್ಲೂ 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 47 ಸಾವಿರ ರೂನಿಂದ 49 ಸಾವಿರ ರೂ ವರೆಗೂ ಇದೆ. ದುಬೈನಲ್ಲಿ ಮಾತ್ರ 47 ಸಾವಿರಕ್ಕಿಂತ ಕಡಿಮೆ ಬೆಲೆ ಇದೆ.

ಅಮೆರಿಕದ ಆರ್ಥಿಕತೆಯ ತುಮುಲ, ನಿರುದ್ಯೋಗ ಅಂಕಿ ಅಂಶದ ಗೊಂದಲ, ಹಣದುಬ್ಬರ ಅನಿಶ್ಚಿತತೆ, ಬಡ್ಡಿ ದರ ಬಗ್ಗೆ ಅಸ್ಪಷ್ಟತೆ, ಡಾಲರ್ ದುರ್ಬಲಗೊಂಡಿರುವುದು ಇವೆಲ್ಲವೂ ಹೂಡಿಕೆದಾರರನ್ನು ಚಿನ್ನದತ್ತ ಗಮನ ಕೊಡುವಂತೆ ಮಾಡಿವೆ. ಹೀಗಾಗಿ, ಚಿನ್ನಕ್ಕೆ ಬೇಡಿಕೆ ಹೆಚ್ಚಿ ಬೆಲೆ ಕೂಡ ಹೆಚ್ಚುತ್ತಿದೆ. ತಜ್ಞರ ಪ್ರಕಾರ ಇನ್ನೂ ಬಹಳಷ್ಟು ದಿನ ಚಿನ್ನದ ಬೆಲೆ ಏರಿಕೆಯ ಟ್ರೆಂಡ್ ಮುಂದುವರಿಯಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಈಗಲೂ ಪ್ರಶಸ್ತ ಸಮಯ ಇದೆ ಎಂಬ ಸಲಹೆಯನ್ನು ಕೊಡಲಾಗಿದೆ.

ಭಾರತದಲ್ಲಿರುವ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52,160 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,890 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 657 ರೂ

ಬೆಂಗಳೂರಿನಲ್ಲಿರುವ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52,210 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,950 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 687 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

ಬೆಂಗಳೂರು: 52,210 ರೂ

ಚೆನ್ನೈ: 52,710 ರೂ

ಮುಂಬೈ: 52,160 ರೂ

ದೆಹಲಿ: 52,310 ರೂ

ಕೋಲ್ಕತಾ: 52,160 ರೂ

ಕೇರಳ: 52,160 ರೂ

ಅಹ್ಮದಾಬಾದ್: 52,210 ರೂ

ಜೈಪುರ್: 52,310 ರೂ

ಲಕ್ನೋ: 52,310 ರೂ

ಭುವನೇಶ್ವರ್: 52,210 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಮಲೇಷ್ಯಾ: 2,700 ರಿಂಗಿಟ್ (48,967 ರುಪಾಯಿ)

ದುಬೈ: 2095 ಡಿರಾಮ್ (46,755 ರುಪಾಯಿ)

ಅಮೆರಿಕ: 575 ಡಾಲರ್ (47,130 ರುಪಾಯಿ)

ಸಿಂಗಾಪುರ: 784 ಸಿಂಗಾಪುರ್ ಡಾಲರ್ (47,639 ರುಪಾಯಿ)

ಕತಾರ್: 2,165 ಕತಾರಿ ರಿಯಾಲ್ (48,738 ರೂ)

ಓಮನ್: 229 ಒಮಾನಿ ರಿಯಾಲ್ (48,741 ರುಪಾಯಿ)

ಕುವೇತ್: 179 ಕುವೇತಿ ದಿನಾರ್ (47,786 ರುಪಾಯಿ)

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ