ಗುರುವಾರ, ಮೇ 2, 2024
ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗು, ಶಿರಸಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗಾಳಿ ಮಳೆ

Twitter
Facebook
LinkedIn
WhatsApp
imagec5f50f57 fd1e 4fc9 8b71 5099fd6c2b79

ಬೆಂಗಳೂರು(ಮಾ.15):  ಕೊಡಗು, ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಶಿವಮೊಗ್ಗಗಳಲ್ಲಿ ಮಂಗಳವಾರ ಮಧ್ಯಾಹ್ನದ ನಂತರ ಸುರಿದ ವರ್ಷದ ಮೊದಲ ಮಳೆ ಕಾದ ಇಳೆಗೆ ತಂಪನ್ನೆರೆಯಿತು.

ಕೊಡಗಿನ ನಾಪೋಕ್ಲು, ಮರಗೋಡು, ಕತ್ತಲೆಕಾಡು ಮತ್ತಿತರ ಕಡೆ ಮಧ್ಯಾಹ್ನದ ನಂತರ ದಿಢೀರ್‌ ಮಳೆಯಾಗಿದ್ದು, ಸುಂಟಿಕೊಪ್ಪದ ಪನ್ಯದಲ್ಲಿ ಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಇದೇ ವೇಳೆ, ಮೂಡಿಗೆರೆ, ಎನ್‌.ಆರ್‌.ಪುರ, ಹೊರನಾಡು, ಬಾಳೆಹೊನ್ನೂರು, ಕಳಸ, ಕೊಪ್ಪ ತಾಲೂಕು ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಧ್ಯಾಹ್ನ 2.30ರಿಂದ 4 ಗಂಟೆಯವರೆಗೆ ಆಲಿಕಲ್ಲು, ಗುಡುಗು ಸಹಿತ ಮಳೆಯಾಗಿದೆ. ಗಾಳಿ, ಮಳೆಗೆ ರಂಭಾಪುರಿ ಪೀಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿಯ 300ಕ್ಕೂ ಅಧಿಕ ಹೆಂಚುಗಳು ಹಾರಿಹೋಗಿವೆ. ಆದರೆ, ಯಾವುದೇ ಅನಾಹುತ ಸಂಭವಿಸಿಲ್ಲ. ಬಾಳೆಹೊನ್ನೂರಿನ ವೀರಭದ್ರಸ್ವಾಮಿ ದೇವಾಲಯದ ಹೆಂಚುಗಳಿಗೂ ಹಾನಿಯಾಗಿದೆ. ಕಳಸದಲ್ಲಿ ಬುಧವಾರ ಮಳೆಗಾಗಿ ಪ್ರಾರ್ಥಿಸಿ ಕಳಸೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿದ್ದು, ಇದಕ್ಕೂ ಒಂದು ದಿನ ಮೊದಲೇ ಮಳೆಯಾಗಿದೆ.

ಇದೇ ವೇಳೆ, ಶಿವಮೊಗ್ಗ, ಹೊಸನಗರ ಭಾಗದ ಕೆಲವೆಡೆಯೂ ತುಂತುರು ಮಳೆ ಸುರಿಯಿತು. ಉತ್ತರ ಕನ್ನಡ ಜಿಲ್ಲೆ ಶಿರಸಿ ಸುತ್ತಮುತ್ತ ಮಧ್ಯಾಹ್ನದ ನಂತರ ಮಳೆಯಾಗಿದ್ದು, ಇಳೆಗೆ ತಂಪನ್ನೆರೆಯಿತು. ವರ್ಷದ ಮೊದಲ ಮಳೆ ಕಾಫಿ ಫಸಲಿಗೆ ಅನುಕೂಲ. ಅಲ್ಲದೆ, ಮಲೆನಾಡು ಭಾಗದಲ್ಲಿ ಇತ್ತೀಚೆಗೆ ಕಂಡು ಬರುತ್ತಿರುವ ಕಾಡ್ಗಿಚ್ಚಿಗೆ ಮಳೆ ಬ್ರೇಕ್‌ ಹಾಕಬಹುದು ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ