ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉದ್ಯೋಗಕ್ಕೆ ಸೇರಿದ್ದ ವಿವಾಹಿತ ಮಹಿಳೆಗೆ ಕಿರುಕುಳ, ಆತ್ಮಹತ್ಯೆ, ಆರೋಪಿ ಪರಾರಿ

Twitter
Facebook
LinkedIn
WhatsApp
hr 171122 death 1

ಉದ್ಯೋಗಕ್ಕೆ ಸೇರಿದ ಮಹಿಳೆಗೆ ಹಿರಿಯ ಅಧಿಕಾರಿ ಕಿರುಕುಳ ನೀಡಿದರು ಎಂದು ಆರೋಪಿಸಿ, ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿ ಎಂಜಿನಿಯರ್ ಪರಾರಿಯಾಗಿದ್ದಾರೆ. ಕೊಡಗು (Kodagu) ಜಿಲ್ಲೆಯ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದವರಾದ ಸೌಮ್ಯಾ (39) ಮನೆಯಲ್ಲಿ ಖಾಲಿಯಾಗಿರುವುದು ಬೇಡವೆಂದು ಕೆಲಸಕ್ಕೆ ಸೇರಿಕೊಂಡರು. ಮೇ ತಿಂಗಳಲ್ಲಿ ಮಡಿಕೇರಿ (Madikeri) ಸೆಸ್ಕಾಂ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಸೇರಿದ್ದರು.

ಆದರೆ ಅದೇ ಕಚೇರಿಯಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ಕಣ್ಣು ಈಕೆಯ ಮೇಲೆ ಬಿದ್ದಿದೆ. ಆಕೆಗೆ ಲೈಂಗಿಕ ಕಿರುಕುಳ (harassment) ನೀಡಲು ಆರಂಭಿಸಿದ್ದಾನೆ. ವಾಟ್ಸಾಪ್ ನಲ್ಲಿ ಚಾಟ್ ಮಾಡುವಂತೆ ಸೌಮ್ಯಾಗೆ ಕಿರುಕುಳ ನೀಡಲಾರಂಭಿಸಿದ್ದ ಎಂದು ದೂರಲಾಗಿದೆ. ಕೊನೆಗೆ, ಕಿರುಕುಳ ತಾಳಲಾರದೆ ಸೌಮ್ಯಾ ಮಂಗಳವಾರ ಮನೆಯಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ.

ತನ್ನ ಪತ್ನಿಗೆ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿನಯ್ ಕಿರುಕುಳ ನೀಡುತ್ತಿದ್ದ ಎಂದು ಸೌಮ್ಯಾ ಪತಿ, ನಿವೃತ್ತ ಸೇನಾ ಯೋಧ ದೂರಿದ್ದಾರೆ. ಈ ಕುರಿತು ಸೌಮ್ಯ ತಾಯಿ ಭವಾನಿ ದೂರು ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ಕೈಗೊಂಡು ಎಇಇ ವಿನಯ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ