ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಲು ಕುಡಿಯುತ್ತಿರುವಾಗ ಮಗು ಸಾವು- ಮನನೊಂದು ಮಗನ ಜೊತೆ ತಾಯಿ ಆತ್ಮಹತ್ಯೆ

Twitter
Facebook
LinkedIn
WhatsApp
hr 171122 death 8

ತಿರುವನಂತಪುರಂ: ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದಲ್ಲಿ ನಡೆದಿದೆ.

ಈ ಘಟನೆ ಇಡುಕ್ಕಿ (Idukki) ಜಿಲ್ಲೆಯ ಉಪ್ಪುತರ ಸಮೀಪ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಲಿಜಾ ಹಾಗೂ ಬೆನ್ ಟಾಮ್ ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ..?: ಎರಡು ದಿನಗಳ ಹಿಂದೆಯಷ್ಟೇ ಎದೆ ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇದರಿಂದ ತಾಯಿ ತೀವ್ರವಾಗಿ ನೊಂದಿದ್ದರು. ಇದೇ ಬೇಜಾರಲ್ಲಿದ್ದ ತಾಯಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದಿರುವಾಗಲೇ ಲಿಜಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಬೆಳಗ್ಗೆ ಮನೆಯವರೆಲ್ಲರೂ ಚರ್ಚ್‍ಗೆ ತೆರಳಿದ ಬಳಿಕ ಲಿಜಾ ಬಾವಿಗೆ ಹಾರಿದ್ದಾರೆ. ಇತ್ತ ಪ್ರಾರ್ಥನೆ ಮುಗಿಸಿ ಬರುತ್ತಿದ್ದಂತೆಯೇ ಮನೆಯಲ್ಲಿ ಲಿಜಾ ಹಾಗೂ ಆಕೆಯ ಮಗ ಇಲ್ಲದಿರುವುದನ್ನು ಗಮನಿಸಿದ ಕುಟುಂಬಸ್ಥರಿಗೆ ಶಾಕ್ ಆಗಿದೆ.

ಕೂಡಲೇ ಎಲ್ಲರೂ ಎಲ್ಲಾ ಕಡೆ ಹುಟುಕಾಟ ನಡೆಸಿದರು. ಈ ವೇಳೆ ಲಿಜಾ ಹಾಗೂ ಆಕೆಯ ಮಗನ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ಬಾವಿಯಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ