ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ; ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕ

Twitter
Facebook
LinkedIn
WhatsApp
ಇಂದು ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ; ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕ

ಮುಂಬೈ(ಮಾ.16): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಮಾರ್ಚ್ 17ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಜರುಗಲಿದ್ದು, ಸರಣಿಯಲ್ಲಿ ಶುಭಾರಂಭ ಮಾಡಲು ಆತಿಥೇಯ ಟೀಂ ಇಂಡಿಯಾ ಸಜ್ಜಾಗಿದೆ. ಮೊದಲ ಏಕದಿನ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ವೈಯುಕ್ತಿಕ ಕಾರಣದಿಂದ ಅಲಭ್ಯರಾಗಿದ್ದು, ರೋಹಿತ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ, ಮೊದಲ ಬಾರಿಗೆ ಭಾರತ ಏಕದಿನ ತಂಡವನ್ನು ನಾಯಕರಾಗಿ ಮುನ್ನಡೆಸಲಿದ್ದಾರೆ. 

ಟೀಮ್ ಇಂಡಿಯಾ ಪರ ಓಪನರ್​ಗಳಾಗಿ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕೊನೆಯ ಟೆಸ್ಟ್ ಪಂದ್ಯದಲ್ಲಿ ಗಿಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದು ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಕೊಹ್ಲಿ ಕೂಡ ಅಮೋಘ ಲಯದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ. ವಿಕೆಟ್ ಕೀಪರ್ ಜವಾಬ್ದಾರಿ ಕೆಎಲ್ ರಾಹುಲ್ ವಹಿಸಿಗೊಳ್ಳಲಿದ್ದಾರೆ. ಆಲ್ರೌಂಡರ್​ಗಳಾಗಿ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಇದ್ದಾರೆ.

ಭಾರತದ ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗಿದೆ. ಸ್ಪಿನ್ ವಿಭಾಗದ ಪೈಕಿ ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ವೇಗಿಗಳಾಗಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಉಮ್ರಾನ್ ಮಲಿಕ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದುಕೊಳ್ಳಬಹುದು. ಶಾರ್ದೂಲ್ ಥಾಕೂರ್, ಜಯದೇವ್ ಉನದ್ಕಟ್ ಆಯ್ಕೆ ಕೂಡ ಇದೆ.

ಇತ್ತ ಆಸೀಸ್ ತಂಡವನ್ನು ಸ್ಟೀವ್ ಸ್ಮಿತ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಡೇವಿಡ್ ವಾರ್ನರ್ ಗಾಯದಿಂದ ಚೇತರಿಸಿಕೊಂಡು ಬಂದಿದ್ದು ಅಪಾಯಕಾರಿ ಆಗಿ ಗೋಚರಿಸಲಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್​ಗೆ ಇದು ಕಮ್​ಬ್ಯಾಕ್ ಪಂದ್ಯ ಆಗಬಹುದು. ಮಿಚೆಲ್ ಮಾರ್ಷ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಅವರು ಯಾವುದೇ ಕ್ರಮಾಂಕದಲ್ಲಿಯೂ ಕ್ರೀಸ್‌ಗೆ ಬಂದು ಮಿಂಚುವ ತಾಕತ್ತು ಹೊಂದಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 143 ಏಕದಿನ ಪಂದ್ಯಗಳು ನಡೆದಿವೆ. ಈ ಪಂದ್ಯಗಳಲ್ಲಿ ಕಾಂಗರೂಗಳು ಪ್ರಾಬಲ್ಯ ಮೆರೆದಿದ್ದಾರೆ. ಆಸ್ಟ್ರೇಲಿಯಾ 80 ಪಂದ್ಯಗಳನ್ನು ಗೆದ್ದಿದ್ದರೆ, ಭಾರತ 53 ಪಂದ್ಯಗಳನ್ನು ಗೆದ್ದಿದೆ. 10 ಪಂದ್ಯಗಳು ಅಪೂರ್ಣವಾಗಿವೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿದೆ. ಅಲ್ಲದೆ, ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಕೂಡ ನೀವು ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನಾದ್ಕಟ್,

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜೈ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಝಂಪಾ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ