ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೋನಲ್ಲಿ ಮಾತನಾಡುತ್ತಿದ್ದ ವಿವಾಹಿತೆಯ ಮೇಲೆ ಅತ್ಯಾಚಾರ ಯತ್ನ – ಆರೋಪಿಗಳಿಗಾಗಿ ಪೊಲೀಸರ ಶೋಧ

Twitter
Facebook
LinkedIn
WhatsApp
file7kz3ooflvhwsmtlldoy1679439394 8

ಮಡಿಕೇರಿ: ವಿವಾಹಿತೆಯ ಮೇಲೆ ತಡರಾತ್ರಿ ಅತ್ಯಾಚಾರಕ್ಕೆ (Rape) ಯತ್ನಿಸಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಬಿಳಿಗೆರೆ (Biligere)  ಗ್ರಾಮದಲ್ಲಿ ನಡೆದಿದೆ.

19 ವರ್ಷದ ವಿವಾಹಿತೆ ರಾತ್ರಿ 9:30ರ ವೇಳೆಗೆ ಮನೆ ಮುಂಭಾಗದಲ್ಲಿ ಪೋನ್‌ನಲ್ಲಿ (Phone) ಮಾತಾನಾಡುತ್ತಿದ್ದಳು. ಈ ಸಂದರ್ಭ ಆಟೋದಲ್ಲಿ (Auto Rickshaw) ಬಂದಿಳಿದ ಮೂವರು ಯುವಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. 

ನಂದಿಮೊಟ್ಟೆಯ ರಾಜ, ಹಟ್ಟಿಹೊಳೆಯ ನೌಶದ್, ಇಗ್ಗೋಡ್ಲಿನ ಫಾರೂಕ್ ಎಂಬವರು ಈ ಪ್ರಕರಣದ ಪ್ರಮುಖ ಆರೋಪಿಗಳು. ಬಲತ್ಕಾರವಾಗಿ ಯುವತಿಯನ್ನು ಕಾಫಿತೋಟದೊಳಗೆ ಎಳೆದೊಯ್ಯುತ್ತಿದ್ದ ಸಂದರ್ಭ ಯುವತಿ ಜೋರಾಗಿ ಕಿರುಚಲಾರಂಭಿಸಿದಳು. ಇದನ್ನು ಗಮನಿಸಿದ ಯುವತಿಯ ಸಂಬಂಧಿಕರು ಭಯಭೀತರಾಗಿ ಕೂಡಲೇ ಸ್ಥಳೀಯರಿಗೆ ಹಾಗೂ ಹಿಂದೂ ಜಾಗರಣ ವೇದಿಕೆಯ (Hindu Jagarana Vedike) ಪ್ರಮುಖರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕ್ಷಣಾರ್ಧದಲ್ಲಿ ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಓರ್ವ ಆರೋಪಿಯಾದ ರಾಜ ಹಾಗೂ ದುಷ್ಕೃತ್ಯಕ್ಕೆ ಬಳಸಿದ್ದ ಎರಡು ಆಟೋಗಳನ್ನು ವಶಕ್ಕೆ ಪಡೆದಿದ್ದಾರೆ. ಈ ದುಷ್ಕೃತ್ಯದಲ್ಲಿ ತೊಡಗಿದ್ದ ಇನ್ನಿಬ್ಬರು ಆರೋಪಿಗಳಾದ ನೌಶದ್ ಹಾಗೂ ಫಾರೂಕ್ ಪರಾರಿಯಾಗಿದ್ದಾರೆ.

file7kz3ooflvhwsmtlldoy1679439394 9

ಫಾರೂಕ್ ಮಾದಾಪುರದಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ. ದುಷ್ಕೃತ್ಯಕ್ಕೆ ಬಳಸಿರುವ 2 ಆಟೋರಿಕ್ಷಾಗಳು ನೌಶದ್ ಹಾಗೂ ರಶೀದ್ ಎಂಬವರಿಗೆ ಸೇರಿದ್ದಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಓರ್ವ ಆರೋಪಿ ಹಾಗೂ ಎರಡು ಆಟೋರಿಕ್ಷಾಗಳನ್ನು ಸೋಮವಾರಪೇಟೆ ಪೋಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳು ಹೊರದೇಶಗಳಿಗೆ ಪಲಾಯನವಾಗುವ ಸಾಧ್ಯತೆಯಿರುವುದರಿಂದ ದುಷ್ಕೃತ್ಯ ನಡೆಸಿದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ತಪ್ಪಿದಲ್ಲಿ ಅನ್ಯಾಯಕ್ಕೊಳಗಾದ ಯುವತಿ ಹಾಗೂ ಅವರ ಕುಟುಂಬ ವರ್ಗಕ್ಕೆ ನ್ಯಾಯ ದೊರಕಿಸಲು ಸಂಘಟನೆಯ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಘಟನೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ಮುಂದುವರೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ