ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೂರ್ಯಕುಮಾರ್ ಕುಮಾರ್ ಸತತ ಮೂರನೇ ಸಲ ಗೋಲ್ಡನ್ ಡಕ್ ಔಟ್; 3ನೇ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಸೋಲು, ಅಗ್ರ ಸ್ಥಾನಕ್ಕೇರಿದ ಆಸ್ಟ್ರೇಲಿಯಾ!

Twitter
Facebook
LinkedIn
WhatsApp
IND vs AUS 20

ಚೆನ್ನೈ: ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 21 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 270 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ 49.1 ಓವರ್ ನಲ್ಲಿ 248 ರನ್ ಗಳಿಗೆ ಆಲೌಟ್ ಆಗುವ ಮೂಲಕ 21 ರನ್ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಅಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಸೋತಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.  ಬಳಿಕ ಗುರಿ ಬೆನ್ನಟ್ಟಿದ ಭಾರತ, ವಿರಾಟ್ ಕೊಹ್ಲಿ (54) ಅರ್ಧಶತಕದ ಹೊರತಾಗಿಯೂ 49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಆಲೌಟ್ ಆಯಿತು.  72 ಎಸೆತಗಳನ್ನು ಎದುರಿಸಿದ ಕೊಹ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರು.  ಹಾರ್ದಿಕ್ ಪಾಂಡ್ಯ ಆಲ್‌ರೌಂಡ್ ಪ್ರದರ್ಶನ ನೀಡಿದರೂ (40 ರನ್ ಹಾಗೂ 3 ವಿಕೆಟ್) ಯಾವುದೇ ಪ್ರಯೋಜನ ಆಗಲಿಲ್ಲ.  ಶುಭಮನ್ ಗಿಲ್ 37, ಕೆ.ಎಲ್. ರಾಹುಲ್ 32, ನಾಯಕ ರೋಹಿತ್ ಶರ್ಮಾ 30 ರನ್ ಗಳಿಸಿದರು.  ಸೂರ್ಯಕುಮಾರ್ ಕುಮಾರ್ ಸತತ ಮೂರನೇ ಸಲವೂ ಗೋಲ್ಡನ್ ಡಕ್ ಔಟ್ ಆದರು. 

ಆಸ್ಟ್ರೇಲಿಯಾದ ಪರ ಆ್ಯಡಂ ಜಾಂಪಾ ನಾಲ್ಕು ಹಾಗೂ ಅಶ್ಟನ್ ಅಗರ್ ಎರಡು ವಿಕೆಟ್ ಕಬಳಿಸಿದರು.  ಈ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ಯಾವುದೇ ಬ್ಯಾಟರ್ ಅರ್ಧಶತಕ ಗಳಿಸದ ಹೊರತಾಗಿಯೂ ಸವಾಲಿನ ಮೊತ್ತ ಪೇರಿಸಲು ಯಶಸ್ವಿಯಾಯಿತು.  ಮಿಚೆಲ್ ಮಾರ್ಷ್ 47, ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33, ಮಾರ್ನಸ್ ಲಾಬುಶೇನ್ 28, ಸೀನ್ ಅಬಾಟ್ 26, ಮಾರ್ಕಸ್ ಸ್ಟೋಯಿನಿಸ್ 25, ಆಶ್ಟನ್ ಅಗರ್ 17, ಮಿಚೆಲ್ ಸ್ಟಾರ್ಸ್ 10 ಹಾಗೂ ಆ್ಯಡಂ ಜಾಂಪಾ ಅಜೇಯ 10 ರನ್ ಗಳಿಸಿದರು.  ನಾಯಕ ಸ್ಟೀವ್ ಮಿತ್ ಖಾತೆ ತೆರೆಯುವಲ್ಲಿ ವಿಫಲರಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಮೂರು ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್‌ಗಳನ್ನು ಗಳಿಸಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ