ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭದ್ರತಾ ಕಾರಣಕ್ಕೆ TikTok ಬ್ಯಾನ್ ಮಾಡಿದ ಬ್ರಿಟಿಷ್ ಸಂಸತ್ತು

Twitter
Facebook
LinkedIn
WhatsApp
tiktok

ಲಂಡನ್: ಚೀನಾದ (China) ವೀಡಿಯೋ ಅಪ್ಲಿಕೇಶನ್ ಟಿಕ್‌ಟಾಕ್ (TikTok) ಅನ್ನು ಬ್ರಿಟನ್ ಸಂಸತ್ತು (British Parliament) ನಿಷೇಧಿಸಿದೆ.

ಭದ್ರತಾ ಕಾಳಜಿಯ ಹಿನ್ನೆಲೆ ಬ್ರಿಟನ್ ಸಂಸತ್ತು ತನ್ನ ನೆಟ್‌ವರ್ಕ್‌ನಲ್ಲಿರುವ ಎಲ್ಲಾ ಸಾಧನಗಳಿಂದಲೂ ಟಿಕ್‌ಟಾಕ್ ಅನ್ನು ನಿರ್ಬಂಧಿಸಿದೆ. ಈ ಹಿಂದೆಯೇ ಭಾರತ ಇಡೀ ದೇಶದಲ್ಲಿ ಟಿಕ್‌ಟಾಕ್ ಅನ್ನು ಬ್ಯಾನ್ ಮಾಡಿದೆ. ಇದೀಗ ಬ್ರಿಟನ್ ಸಂಸತ್ತು ಭದ್ರತಾ ಕಾರಣಕ್ಕೆ ಟಿಕ್‌ಟಾಕ್ ಅನ್ನು ನಿಷೇಧಿಸಿದೆ.

ಹೌಸ್ ಆಫ್ ಕಾಮನ್ಸ್ ಹಾಗೂ ಲಾರ್ಡ್ಸ್ ಎರಡೂ ಆಯೋಗಗಳು ಟಿಕ್‌ಟಾಕ್ ಅನ್ನು ಎಲ್ಲಾ ಸಂಸದೀಯ ಸಾಧನಗಳು ಹಾಗೂ ಸಂಸದೀಯ ನೆಟ್‌ವರ್ಕ್‌ಗಳಿಂದ ನಿರ್ಬಂಧಿಸಲು ನಿರ್ಧರಿಸಿವೆ ಎಂದು ಸಂಸತ್ತಿನ ವಕ್ತಾರರು ತಿಳಿಸಿದ್ದಾರೆ. ಆದರೆ ಈ ಕ್ರಮವನ್ನು ಟಿಕ್‌ಟಾಕ್ ವಕ್ತಾರರು ವಿರೋಧಿಸಿದ್ದು, ಇದು ಕಂಪನಿಗೆ ಕೆಟ್ಟ ಹೆಸರು ತಂದುಕೊಡುತ್ತದೆ ಎಂದಿದ್ದಾರೆ. 

ಬ್ರಿಟನ್ ಕಳೆದ ವಾರ ಸರ್ಕಾರಿ ಫೋನ್‌ಗಳಲ್ಲಿ ಚೀನಾದ ಒಡೆತನದ ವೀಡಿಯೊ ಅಪ್ಲಿಕೇಶನ್ ಅನ್ನು ನಿಷೇಧಿಸಿತ್ತು. ಸೈಬರ್ ಭದ್ರತೆಯು ಸಂಸತ್ತಿನ ಪ್ರಮುಖ ಆದ್ಯತೆಯಾಗಿದೆ ಎಂದು ವಕ್ತಾರರು ಹೇಳಿದ್ದಾರೆ. ಅಮೆರಿಕ, ಕೆನಡಾ, ಬೆಲ್ಜಿಯಂ ಹಾಗೂ ಯುರೋಪಿಯನ್ ಕಮಿಷನ್ ಈಗಾಗಲೇ ಸರ್ಕಾರಿ ಸಾಧನಗಳಿಂದ ಈ ಅಪ್ಲಿಕೇಶನ್ ಅನ್ನು ನಿಷೇಧಿಸಿವೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ