ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಾಲಾ, ಕಾಲೇಜುಗಳಲ್ಲೂ ಡ್ರಗ್ಸ್ ಮಾರಾಟವಾಗ್ತಿದೆ – ಅಮಿತ್ ಶಾ

Twitter
Facebook
LinkedIn
WhatsApp
amit shah 0116307512631660060556

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲಾ – ಕಾಲೇಜುಗಳು ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಡ್ರಗ್ಸ್ ಮಾರಾಟವಾಗುತ್ತಿದೆ. ಇದರ ವಿರುದ್ಧ ರಾಜ್ಯಗಳು ಸಮರ ಸಾರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತು ದಕ್ಷಿಣದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಮ್ಮೇಳನಕ್ಕೆ ಚಾಲನೆ ನೀಡಿ ಅವರಿಂದು ಮಾತನಾಡಿದರು. 

ಪಾಕಿಸ್ತಾನ, ಇರಾನ್ ಭಾಗಗಳಿಂದ ಸಮುದ್ರ ಮಾರ್ಗಗಳ ಮೂಲಕ ಡ್ರಗ್ಸ್ ಭಾರತಕ್ಕೆ ರವಾನೆಯಾಗುತ್ತಿದೆ. ಆದ್ದರಿಂದ ದಕ್ಷಿಣ ಭಾಗದ ಕೋಸ್ಟ್ ಗಾರ್ಡ್ ನಲ್ಲಿ ಹೆಚ್ಚು ಮುಂಜಾಗ್ರತೆ ವಹಿಸಬೇಕು. 30%, 40%, 50% ಜನತೆ ಡ್ರಗ್ಸ್‌ಗೆ ಅಡಿಕ್ಟ್ ಆದ್ರೆ ಹೇಗೆ? ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟಗಳಲ್ಲಿ ಸಮಿತಿಗಳು ರಚನೆಯಾಗಿದ್ದು, ನಿರಂತರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. 

ನಿರ್ಮೂಲನೆ ಮಾಡಲು ಮೋದಿ ನೇತೃತ್ವದ ಸರ್ಕಾರ ಸಮರ ಸಾರಿದೆ. ಜನರಿಗೆ ಡ್ರಗ್ಸ್ ಮುಕ್ತ ರಾಜ್ಯ, ದೇಶ ಮಾಡೋದು ಈ ಅಭಿಯಾನದ ಉದ್ದೇಶ ಸಹ ಆಗಿದೆ. ಡ್ರಗ್ಸ್ ಮುಕ್ತ ದೇಶ ಹಾಗೂ 5 ಟ್ರೆಲಿಯನ್ ಆರ್ಥಿಕ ವ್ಯವಸ್ಥೆ ನಿರ್ಮಾಣ ಮಾಡುವ ಗುರಿಯನ್ನಿಟ್ಟುಕೊಂಡು ಮೋದಿ ಸರ್ಕಾರ ಕೆಲಸ ಮಾಡುತ್ತಿದೆ. ಪ್ರತಿ ಮನೆ ಮನೆಯಲ್ಲೂ ಡ್ರಗ್ಸ್ ವಿರುದ್ಧ ಅಭಿಯಾನ ಶುರುವಾಗಬೇಕು ಎಂದು ಕರೆ ನೀಡಿದರು.

ಡ್ರಗ್ಸ್ ಮುಕ್ತ ಮಾಡೋದು ಎಲ್ಲ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಬೇಕು. ಎಲ್ಲ ಇಲಾಖೆಗಳೂ ಇದಕ್ಕೆ ಕೈ ಜೋಡಿಸಬೇಕು. ಮಾದಕ ವ್ಯಸನಿಗಳಿಗೆ ಪುನರ್ವಸತಿ ಕಲ್ಪಿಸೋದು, ಡ್ರಗ್ಸ್ ನಾಶ ಮಾಡೋದು, ಡ್ರಗ್ಸ್ ಮಾರಾಟದ ವಿರುದ್ಧ ಸಮರ ಸಾರೋದು ನಮ್ಮೆಲ್ಲರ ಗುರಿಯಾಗಬೇಕು. ಸಣ್ಣ-ಸಣ್ಣ ವ್ಯಕ್ತಿಗಳಿಗೆ ಡ್ರಗ್ಸ್ ಸಾಗಣೆ ಆಗ್ತಿದೆ. ಇದು ಹೇಗೆ ಆಗ್ತಿದೆ ಅನ್ನೋದನ್ನ ಪತ್ತೆ ಹಚ್ಚಿ ಕ್ರಮ ಆಗಬೇಕು ಎಂದು ತಾಕೀತು ಮಾಡಿದರು.ನಮ್ಮಲ್ಲಿ ಪ್ರಬಲ ಕಾನೂನುಗಳಿವೆ. ಅವುಗಳನ್ನ ಸಮರ್ಥವಾಗಿ ಬಳಸಿಕೊಳ್ಳಬೇಕು. ಕಾನೂನು ಸಮರ್ಥವಾಗಿ ಬಳಕೆ ಮಾಡಿಕೊಂಡರೆ ಡ್ರಗ್ಸ್ ಮುಕ್ತ ದೇಶಕ್ಕೆ ಸಹಾಯವಾಗುತ್ತದೆ. ಡ್ರಗ್ಸ್, ಡ್ರಗ್ಸ್ ನೆಟ್‌ವರ್ಕ್, ಡ್ರಗ್ಸ್ ಅಪರಾಧಿಗಳು ಮತ್ತು ಡ್ರಗ್ಸ್ ವ್ಯಸನಿಗಳು ಈ ನಾಲ್ಕರ ವಿರುದ್ಧ ನಾವು ಕೆಲಸ ಮಾಡಬೇಕು. ಈಗಾಗಲೇ ದೇಶದಲ್ಲಿ 8 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ನಾಶ ಮಾಡಲಾಗಿದೆ. ಎನ್‌ಸಿಬಿ ಇಂತಹ ಮಹತ್ವದ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist